ಬೆಳಗಾವಿ:
ಜಿಲ್ಲೆಯ ಅಥಣಿ ತಾಲೂಕಿನ ಕಟಗೇರಿ ಗ್ರಾಮದ ಕಡು ಬಡ ಕುಟುಂಬದಲ್ಲಿ ಜನಿಸಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳೊಂದಿಗೆ ರಾಜ್ಯ ಟಾಪರ್ ಆಗಿ ಹೊರಹೊಮ್ಮಿದ್ದು ನಮ್ಮ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ. ಶೇ. 100% ಮಾಡಿದ ವಿದ್ಯಾರ್ಥಿನಿಗೆ ಅಭಿನಂದನೆಗಳನ್ನು ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ತಿಳಿಸಿದ್ದಾರೆ.

ಕಠಿಣ ಪರಿಶ್ರಮ, ದೃಢಸಂಕಲ್ಪ ಮತ್ತು ನಿರಂತರ ಪ್ರಯತ್ನ ಇದ್ದರೆ ಯಾವುದೇ ಗುರಿಯೂ ಅಸಾಧ್ಯವಲ್ಲ ಎಂಬುದನ್ನು ನಿಮ್ಮ ಅದ್ಭುತ ಸಾಧನೆ ಮತ್ತೆ ಸಾಬೀತುಪಡಿಸಿದೆ. ಗ್ರಾಮೀಣ ಭಾಗದಿಂದ ಬಂದ ಪ್ರತಿಭೆಯಾಗಿ ನೀವು ಸಾಧಿಸಿರುವ ಈ ಯಶಸ್ಸು ಸಾವಿರಾರು ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ. ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಿ ನಿಮ್ಮ ಕುಟುಂಬ, ಶಾಲೆ ಹಾಗೂ ಜಿಲ್ಲೆಯ ಕೀರ್ತಿಯನ್ನು ಇನ್ನಷ್ಟು ಹೆಚ್ಚಿಸಲಿ ಎಂದು ಹಾರೈಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಸುದ್ದಿಗಾಗಿ : 9902284143
