Tuesday, August 4, 2026
Homeದೇಶಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ:ಕೆಜೆಪಿ ಹೋರಾಟ ಯಶಸ್ಸು...!!!

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ:ಕೆಜೆಪಿ ಹೋರಾಟ ಯಶಸ್ಸು…!!!

ದೆಹಲಿ:

ದೇಶಾದ್ಯಂತ ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆಗಳ ನಡುವೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜುಲೈ 25 ಶನಿವಾರ ಮಧ್ಯಾಹ್ನ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸುವ ಮೂಲಕ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ನೀಟ್ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಮರುಕಳಿಸುತ್ತಿರುವುದು ಹಾಗೂ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗಳಿಂದಾಗಿ ಹಾಗೂ ವಿರೋಧ ಪಕ್ಷದ ನಾಯಕರು ಮತ್ತು ಯುವ ಸಂಘಟನೆಗಳು ಸಚಿವಾಲಯದ ಬದಲಾವಣೆಯ ಪ್ರಸ್ತಾವನೆಗಳನ್ನು ತಿರಸ್ಕರಿಸಿ, ಅವರನ್ನು ಸಂಪುಟದಿಂದ ಸಂಪೂರ್ಣವಾಗಿ ಕೈಬಿಡಬೇಕೆಂದು ಆಗ್ರಹಿಸಿದ ಹಿನ್ನೆಲೆ ಅವರಿಂದ ರಾಜಿನಾಮೆ ತೆಗೆದುಕೊಳ್ಳಲಾಗಿದೆ.

ಧರ್ಮೇಂದ್ರ ಪ್ರಧಾನ್ ಅವರು ಲೋಕಸಭೆಯಲ್ಲಿ ಒಡಿಶಾದ ಸಂಬಲ್‌ಪುರವನ್ನು ಪ್ರತಿನಿಧಿಸುವ ಸಂಸತ್ ಸದಸ್ಯರಾಗಿದ್ದು ಈ ಹಿಂದೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾಗಿ (2014–2021), ಉಕ್ಕು ಸಚಿವರಾಗಿ (2019–2021) ಹಾಗೂ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವರಾಗಿ (2017–2024) ಸೇವೆ ಸಲ್ಲಿಸಿದ್ದಾರೆ. ಜುಲೈ 2021 ರಿಂದ ಜುಲೈ 2026 ರವರೆಗೆ ಕೇಂದ್ರ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದರು. ಈ ಅವಧಿಯಲ್ಲಿ ಪ್ರಮುಖ ಶೈಕ್ಷಣಿಕ ನೀತಿಗಳು ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ಸುಧಾರಣೆಗಳ ಉಸ್ತುವಾರಿ ವಹಿಸಿದ್ದರು.

ಹೆಚ್ಚಿನ ಸುದ್ದಿ