Monday, July 6, 2026
Homeಜಿಲ್ಲಾ ಸುದ್ದಿಗಳುಮುದ್ದೇಬಿಹಾಳ ಕಾಂಗ್ರೆಸ್ ಪಕ್ಷದ BLA-2 ಹಾಗೂ SIR ಸಭೆ ಜುಲೈ 6ರಂದು

ಮುದ್ದೇಬಿಹಾಳ ಕಾಂಗ್ರೆಸ್ ಪಕ್ಷದ BLA-2 ಹಾಗೂ SIR ಸಭೆ ಜುಲೈ 6ರಂದು

ಮುದ್ದೇಬಿಹಾಳ: ಪಟ್ಟಣದ ವಿಜಯ ಮಹಾಂತೇಶ್ ಮಂಗಲ ಭವನದಲ್ಲಿ ಜುಲೈ 6, 2026 (ಸೋಮವಾರ) ಬೆಳಿಗ್ಗೆ 10.00 ಗಂಟೆಗೆ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ BLA-2 ಹಾಗೂ SIR ಸಭೆಯನ್ನು ಆಯೋಜಿಸಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಭೆಯ ಅಧ್ಯಕ್ಷತೆಯನ್ನು ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷರು ಹಾಗೂ ಮುದ್ದೇಬಿಹಾಳ ಶಾಸಕ ಸಿ. ಎಸ್. ನಾಡಗೌಡ ವಹಿಸಲಿದ್ದಾರೆ.

ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಭಾಗವಹಿಸಲಿದ್ದು, ಕೆಪಿಸಿಸಿ ಕಚೇರಿಯಿಂದ ಬೇವಿನಮರದ ಅವರು ಆಗಮಿಸಿ BLA-2 ಹಾಗೂ SIR ಕುರಿತು ಅಗತ್ಯ ಮಾಹಿತಿ ಮತ್ತು ಮಾರ್ಗದರ್ಶನ ನೀಡಲಿದ್ದಾರೆ. ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಎಲ್ಲಾ ಬೂತ್ ಮಟ್ಟದ BLA-2 ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಕಡ್ಡಾಯವಾಗಿ ಸಭೆಯಲ್ಲಿ ಭಾಗವಹಿಸಬೇಕೆಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಸುದ್ದಿ