Saturday, June 6, 2026
Homeಜಿಲ್ಲಾ ಸುದ್ದಿಗಳುಎಸ್.ಸಿಗೆ ಸೇರಿಸಲು ಮಡಿವಾಳರ ಬೃಹತ್ ಪ್ರತಿಭಟನೆ; ಸ್ಥಳಕ್ಕೆ ಸಚಿವ ಪ್ರಿಯಾಂಕ ಖರ್ಗೆ ಬೇಟಿ.

ಎಸ್.ಸಿಗೆ ಸೇರಿಸಲು ಮಡಿವಾಳರ ಬೃಹತ್ ಪ್ರತಿಭಟನೆ; ಸ್ಥಳಕ್ಕೆ ಸಚಿವ ಪ್ರಿಯಾಂಕ ಖರ್ಗೆ ಬೇಟಿ.

ವರದಿ :: ವಿರೂಪಾಕ್ಷ ಹಾಲಗಳಲೆ

ಬೆಂಗಳೂರು ಮಾರ್ಚ್ 17; ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿಂದುಳಿದಿರುವ ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಒತ್ತಾಯಿಸಿ ಮಡಿವಾಳ ಸಮುದಾಯದ ಸಾವಿರಾರು ಜನರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಸಮಾಜದ ಮುಖಂಡರಾದ ನಿವೃತ್ತ ಪೋಲಿಸ್ ಅಧಿಕಾರಿ ಹೆಚ್.ವೆಂಕಟೇಶ್‌,ಮಡಿವಾಳ ಸಮಾಜದ ಜಗದ್ಗುರು ಡಾ. ಬಸವ ಮಾಚಿದೇವ ಸ್ವಾಮೀಜಿ, ಮುಕ್ತಾನಂದ ಸ್ವಾಮೀಜಿಗಳು ಹಾಗೂ ಕರ್ನಾಟಕ ರಾಜ್ಯ ಮಡಿವಾಳ ಕ್ಷೇಮಾಭಿವೃದ್ಧಿ ಸಂಘ ಅಧ್ಯಕ್ಷ ಎಂ.ಕೆ. ಹನುಮಂತಪ್ಪ ಹಾಗೂ ಉತ್ತರ ಕರ್ನಾಟಕ ಮಡಿವಾಳರ ಸಂಘದ ಉಪಾಧ್ಯಕ್ಷ ದುರ್ಗೇಶ ಜಿ. ಮಡಿವಾಳರ ಅವರ ನೇತೃತ್ವದಲ್ಲಿ ಅಹೋರಾತ್ರಿ ಪ್ರತಿಭಟನೆ ಮುಂದುವರೆದಿದೆ

ಸಮಾಜದ ಮುಖಂಡ‌ ನಿವೃತ್ತ ಐಪಿಎಸ್ ಅಧಿಕಾರಿ ಹೆಚ್.ವೆಂಕಟೇಶ್ ಮಾತನಾಡಿ, ಮಡಿವಾಳರನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಈ ಹಿಂದೆ ಸಮಾಜದ ಸ್ವಾಮೀಜಿಗಳು ಹಾಗೂ ಹಿರಿಯರು ಹೋರಾಟ ನಡೆಸಿದ ಪರಿಣಾಮ, ರಾಜ್ಯ ಸರ್ಕಾರ ಕುಲಶಾಸ್ತ್ರೀಯ ಅಧ್ಯಯನ ಮಾಡಿಸಿ ವರದಿಯನ್ನು ಸ್ವೀಕರಿಸಿದೆ. ಆದರೆ, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡದೇ ರಾಜ್ಯ ಸರ್ಕಾರ ನಿರ್ಲಕ್ಷ್ಯ ದೋರಣೆ ತಾಳಿದೆ. ಹೀಗಾಗಿ ಮಡಿವಾಳರು ಸಂಘಟಿತರಾಗಿ ಹಕ್ಕನ್ನು ಪಡೆದುಕೊಳ್ಳಬೇಕಾಗಿದ್ದು ಸರ್ಕಾರದ ಮೇಲೆ ಒತ್ತಡ ಹೇರಲು ಪ್ರತಿಭಟನೆ ನಡೆಸಲಾಗುತ್ತದೆ ಎಂದು ಹೇಳಿದರು.

ಸ್ಥಳಕ್ಕೆ ಬೇಟಿ ನೀಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ತಮ್ಮ ಎಲ್ಲ ಬೇಡಿಕೆಗಳನ್ನು ಮುಖ್ಯಮಂತ್ರಿ ಯವರ ಗಮನಕ್ಕೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

ಹೆಚ್ಚಿನ ಸುದ್ದಿ