Wednesday, August 12, 2026
Homeರಾಜಕೀಯಡಿ.ಕೆ.ಶಿವಕುಮಾರ್ ಸಂಪುಟದ ಸಚಿವರಿಗೆ ಕೊನೆಗೂ ಸಿಕ್ತು ಖಾತೆ: ಯಾರಿಗೆ ಯಾವ ಇಲಾಖೆ? ಇಲ್ಲಿದೆ ಅಧಿಕೃತ ಪಟ್ಟಿ!

ಡಿ.ಕೆ.ಶಿವಕುಮಾರ್ ಸಂಪುಟದ ಸಚಿವರಿಗೆ ಕೊನೆಗೂ ಸಿಕ್ತು ಖಾತೆ: ಯಾರಿಗೆ ಯಾವ ಇಲಾಖೆ? ಇಲ್ಲಿದೆ ಅಧಿಕೃತ ಪಟ್ಟಿ!

ಡಿ.ಕೆ.ಶಿವಕುಮಾರ್ ಸಂಪುಟದ ಸಚಿವರಿಗೆ ಕೊನೆಗೂ ಸಿಕ್ತು ಖಾತೆ: ಯಾರಿಗೆ ಯಾವ ಇಲಾಖೆ? ಇಲ್ಲಿದೆ ಅಧಿಕೃತ ಪಟ್ಟಿ!

ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಗೊಂದಲಗಳಿಗೆ ಕೊನೆಗೂ ತೆರೆಬಿದ್ದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

ಕಳೆದ ಆಗಸ್ಟ್ 3ರಂದು 19 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರೂ, ಖಾತೆ ಹಂಚಿಕೆಯಾಗದೇ 10 ದಿನಗಳು ಕಳೆದಿದ್ದವು. ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿದ್ದ ಶಾಸಕರನ್ನು ಸಮಾಧಾನಪಡಿಸುವುದು, ಜಾತಿ ಲೆಕ್ಕಾಚಾರ, ಪ್ರಾದೇಶಿಕ ಸಮತೋಲನ ಹಾಗೂ ಹೈಕಮಾಂಡ್ ಜೊತೆಗಿನ ಸುದೀರ್ಘ ಚರ್ಚೆಗಳ ಕಾರಣದಿಂದಾಗಿ ವಿಳಂಬವಾಗಿತ್ತು. ಇದೀಗ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿರುವುದರಿಂದ ಹೈಕಮಾಂಡ್ ಒಪ್ಪಿಗೆ ಪಡೆದು ಇಂದು (ಬುಧವಾರ) ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿ, ಆದೇಶ ಹೊರಡಿಸಲಾಗಿದೆ.

ಪ್ರಮುಖ ಸಚಿವರಿಗೆ ಖಾತೆ ಬದಲಾವಣೆ:

ಈಗಾಗಲೇ ಸಂಪುಟದಲ್ಲಿದ್ದ ಹಿರಿಯ ಸಚಿವರ ಖಾತೆಗಳಲ್ಲೂ ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ.

ಕೆ.ಎಚ್. ಮುನಿಯಪ್ಪ: ಆಹಾರ ಇಲಾಖೆಯಿಂದ ಸಾಮಾಜಿಕ ಕಲ್ಯಾಣ ಇಲಾಖೆಗೆ ವರ್ಗಾವಣೆ.
ರಾಮಲಿಂಗಾರೆಡ್ಡಿ: ಜಲಸಂಪನ್ಮೂಲ ಇಲಾಖೆಯಿಂದ ಅರಣ್ಯ, ಪರಿಸರ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಗೆ ಸ್ಥಳಾಂತರ.
ಯು.ಟಿ. ಖಾದರ್: ಆರೋಗ್ಯ ಇಲಾಖೆಯ ಜೊತೆಗೆ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಇಲಾಖೆಗಳ ಹೆಚ್ಚುವರಿ ಜವಾಬ್ದಾರಿ.

ಸಚಿವರು ಹಾಗೂ ಅವರಿಗೆ ಹಂಚಿಕೆಯಾದ ಇಲಾಖೆಗಳ ಪೂರ್ಣ ಪಟ್ಟಿ:

ಎನ್. ಚಲುವರಾಯಸ್ವಾಮಿ – ಜಲಸಂಪನ್ಮೂಲ ಇಲಾಖೆ
ಎಚ್.ಸಿ. ಬಾಲಕೃಷ್ಣ – ಪೌರಾಡಳಿತ ಇಲಾಖೆ
ಸಂತೋಷ್ ಲಾಡ್ – ಕಾರ್ಮಿಕ ಇಲಾಖೆ
ಬಸವಂತಪ್ಪ – ಬಂದರು ಮತ್ತು ಮೀನುಗಾರಿಕೆ ಇಲಾಖೆ
ಮಧು ಬಂಗಾರಪ್ಪ – ಪ್ರಾಥಮಿಕ ಶಿಕ್ಷಣ ಇಲಾಖೆ
ಬಸವರಾಜ ರಾಯರೆಡ್ಡಿ – ಉನ್ನತ ಶಿಕ್ಷಣ ಇಲಾಖೆ
ಬಿ. ಝಡ್. ಜಮೀರ್ ಅಹಮದ್ ಖಾನ್ – ವಸತಿ ಇಲಾಖೆ
ಲಕ್ಷ್ಮಣ್ ಸವದಿ – ಸಹಕಾರ ಇಲಾಖೆ
ಡಾ. ಅಜಯ್ ಸಿಂಗ್ – ಸಣ್ಣ ನೀರಾವರಿ ಇಲಾಖೆ
ಎಸ್. ಎಸ್. ಮಲ್ಲಿಕಾರ್ಜುನ – ಗಣಿ ಮತ್ತು ಭೂವಿಜ್ಞಾನ ಇಲಾಖೆ
ರಿಜ್ವಾನ್ ಅರ್ಷದ್ – ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ
ಶಿವರಾಜ್ ತಂಗಡಗಿ – ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ಆರ್. ಪುಟ್ಟರಂಗಶೆಟ್ಟಿ – ಪಶುಸಂಗೋಪನೆ ಇಲಾಖೆ
ಕೆ.ಎಂ. ಶಿವಲಿಂಗೇಗೌಡ – ಅಬಕಾರಿ ಇಲಾಖೆ
ವಿಜಯಾನಂದ ಕಾಶಪ್ಪನವರ್ – ಸಣ್ಣ ಕೈಗಾರಿಕೆ ಇಲಾಖೆ
ಪಿ.ಎಂ. ನರೇಂದ್ರ ಸ್ವಾಮಿ – ಕೃಷಿ ಇಲಾಖೆ
ಕೆ. ನಾಗೇಂದ್ರ – ಯೋಜನೆ ಮತ್ತು ಸಾಂಖ್ಯಿಕ ಇಲಾಖೆ
ಎಸ್.ವಿ. ರಘುಮೂರ್ತಿ – ಪರಿಶಿಷ್ಟ ಪಂಗಡಗಳ (ST) ಕಲ್ಯಾಣ ಇಲಾಖೆ
ರುದ್ರಪ್ಪ ಲಮಾಣಿ – ಸಕ್ಕರೆ ಖಾತೆ

ಇತರೆ ಪ್ರಮುಖ ಹುದ್ದೆಗಳ ಜವಾಬ್ದಾರಿ:

ಮಂಕಾಳು ವೈದ್ಯ – ಡೆಪ್ಯುಟಿ ಸ್ಪೀಕರ್ (ಉಪಾಧ್ಯಕ್ಷರು, ವಿಧಾನಸಭೆ)
ಆರ್.ವಿ. ದೇಶಪಾಂಡೆ – ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರು
ಎ.ಎಸ್. ಪೊನ್ನಣ್ಣ – ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ
ಅಧಿಕೃತ ಗೇಜೆಟ್ ಅಧಿಸೂಚನೆ ಹೊರಬಿದ್ದ ತಕ್ಷಣ ನೂತನ ಸಚಿವರು ತಮ್ಮ ತಮ್ಮ ಇಲಾಖೆಗಳ ಜವಾಬ್ದಾರಿಯನ್ನು ವಹಿಸಿಕೊಳ್ಳುತ್ತಿದ್ದಾರೆ..

ಹೆಚ್ಚಿನ ಸುದ್ದಿ