Monday, August 10, 2026
Homeಜಿಲ್ಲಾ ಸುದ್ದಿಗಳುತಾಂತ್ರಿಕ ದೋಷದಿಂದ ಹೊತ್ತಿ ಉರಿದ ಕಾರು; ದಂಪತಿ ಪ್ರಾಣಾಪಾಯದಿಂದ ಪಾರು

ತಾಂತ್ರಿಕ ದೋಷದಿಂದ ಹೊತ್ತಿ ಉರಿದ ಕಾರು; ದಂಪತಿ ಪ್ರಾಣಾಪಾಯದಿಂದ ಪಾರು

ತಾಂತ್ರಿಕ ದೋಷದಿಂದ ಹೊತ್ತಿ ಉರಿದ ಕಾರು; ದಂಪತಿ ಪ್ರಾಣಾಪಾಯದಿಂದ ಪಾರು

ಬೀದರ್ | ಬಸವಕಲ್ಯಾಣ: ತಾಂತ್ರಿಕ ದೋಷದಿಂದ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರು ಹೊತ್ತಿ ಉರಿದ ಘಟನೆ ಬಸವಕಲ್ಯಾಣ ತಾಲೂಕಿನ ತಡೋಳಾ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ-65ರಲ್ಲಿ ನಡೆದಿದೆ.

ಮಹಾರಾಷ್ಟ್ರದಿಂದ ಹೈದರಾಬಾದ್ ಕಡೆಗೆ ತೆರಳುತ್ತಿದ್ದ ಹೈದರಾಬಾದ್ ಮೂಲದ ದಂಪತಿಗಳು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ತಡೋಳಾ ಗ್ರಾಮದ ಬಳಿ ತೆರಳುತ್ತಿದ್ದ ವೇಳೆ ಕಾರಿನಲ್ಲಿ ತಾಂತ್ರಿಕ ದೋಷ ಉಂಟಾಗಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದನ್ನು ಗಮನಿಸಿದ ದಂಪತಿಗಳು ಕೂಡಲೇ ಕಾರಿನಿಂದ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳಿಕ ಬೆಂಕಿ ತೀವ್ರಗೊಂಡ ಪರಿಣಾಮ ಕಾರು ಸಂಪೂರ್ಣವಾಗಿ ಹೊತ್ತಿ ಉರಿದಿದೆ.

ಘಟನೆಯ ಮಾಹಿತಿ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಅಗ್ನಿಶಾಮಕ ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆ ಹಾಗೂ ಬೆಳಕಿನ ಸಹಕಾರದಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು ಎಂದು ತಿಳಿದುಬಂದಿದೆ.

ಘಟನೆಯಿಂದ ರಾಷ್ಟ್ರೀಯ ಹೆದ್ದಾರಿ-65ರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೃಷ್ಟವಶಾತ್ ಕಾರಿನಲ್ಲಿದ್ದ ದಂಪತಿಗಳು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.

ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ತಾಂತ್ರಿಕ ದೋಷವೇ ಅಥವಾ ಇತರೆ ಕಾರಣವೇ ಎಂಬುದು ಸಂಬಂಧಪಟ್ಟ ಅಧಿಕಾರಿಗಳ ಪರಿಶೀಲನೆಯ ಬಳಿಕ ತಿಳಿದುಬರಬೇಕಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಹೆಚ್ಚಿನ ಸುದ್ದಿ