ಬೆಂಗಳೂರು:
ತುಂಗಭದ್ರಾ ಜಲಾಶಯಕ್ಕೆ ನೂತನವಾಗಿ ಅಳವಡಿಸಲಾಗಿರುವ 33 ಕ್ರಸ್ಟ್ ಗೇಟ್ಗಳ ಲೋಕಾರ್ಪಣೆಯನ್ನು ಇಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೆರವೇರಿಸಲಿದ್ದಾರೆ.
ರಾಜ್ಯದ ರೈತರ ಹಿತದೃಷ್ಟಿಯಿಂದ ದಾಖಲೆಯ ಅತ್ಯಂತ ಕಡಿಮೆ ಅವಧಿಯಲ್ಲಿ ಗೇಟ್ಗಳ ಅಳವಡಿಕೆ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. ಮಳೆಗಾಲ ಆರಂಭಕ್ಕೂ ಮುನ್ನವೇ ಕಾಮಗಾರಿ ಪೂರ್ಣಗೊಂಡಿರುವುದರಿಂದ ಜಲಾಶಯದಲ್ಲಿ ನೀರು ಸಂಗ್ರಹಕ್ಕೆ ಯಾವುದೇ ಅಡಚಣೆ ಇಲ್ಲದಂತಾಗಿದ್ದು, ರೈತರಲ್ಲಿ ಹೊಸ ಭರವಸೆ ಮೂಡಿದೆ.
ಸುಮಾರು ಏಳು ದಶಕಗಳಷ್ಟು ಹಳೆಯದಾಗಿದ್ದ ಕ್ರಸ್ಟ್ ಗೇಟ್ಗಳ ಬದಲಿಗೆ ಅತ್ಯಾಧುನಿಕ ನೂತನ ಗೇಟ್ಗಳನ್ನು ಅಳವಡಿಸಲಾಗಿದ್ದು, ಇದು ರಾಜ್ಯ ಸರ್ಕಾರದ ಬದ್ಧತೆ ಹಾಗೂ ಶೀಘ್ರ ಕಾರ್ಯನಿರ್ವಹಣೆಗೆ ಸಾಕ್ಷಿಯಾಗಿದೆ ಎಂದು ಸರ್ಕಾರ ತಿಳಿಸಿದೆ.
