Monday, August 3, 2026
HomeUncategorizedನಿಖರ ಮತದಾರರ ಪಟ್ಟಿಯ ಮೂಲಕ ಪ್ರಜಾಪ್ರಭುತ್ವ ಪ್ರಕ್ರಿಯೆ ಬಲಪಡಿಸಲು ಸಾಧ್ಯ: ಪಿ.ಸುಧಾಕರ ರೆಡ್ಡಿ

ನಿಖರ ಮತದಾರರ ಪಟ್ಟಿಯ ಮೂಲಕ ಪ್ರಜಾಪ್ರಭುತ್ವ ಪ್ರಕ್ರಿಯೆ ಬಲಪಡಿಸಲು ಸಾಧ್ಯ: ಪಿ.ಸುಧಾಕರ ರೆಡ್ಡಿ

ಮೈಸೂರು: ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಸುಧಾರಣಾ ಪ್ರಕ್ರಿಯೆಗೆ ವಿರೋಧ ವ್ಯಕ್ತಪಡಿಸುತ್ತಿವೆ ಎಂದು ಮಾಜಿ ಎಂಎಲ್‍ಸಿ ಹಾಗೂ ತಮಿಳುನಾಡು ಮತ್ತು ಕರ್ನಾಟಕದ ಬಿಜೆಪಿ ರಾಷ್ಟ್ರೀಯ ಸಹ-ಪ್ರಭಾರಿ ಡಾ. ಪೆÇಂಗುಲೇಟಿ ಸುಧಾಕರ ರೆಡ್ಡಿ ಅವರು ಆಕ್ಷೇಪಿಸಿದ್ದಾರೆ.
ಬಿಜೆಪಿ ಮೈಸೂರು ಜಿಲ್ಲಾ ಕಚೇರಿಯಲ್ಲಿ ಇಂದು ನಡೆದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‍ಐಆರ್) ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪಾರದರ್ಶಕ ಮತ್ತು ನಿಖರವಾದ ಮತದಾರರ ಪಟ್ಟಿಯ ಮೂಲಕ ಪ್ರಜಾಪ್ರಭುತ್ವ ಪ್ರಕ್ರಿಯೆಗಳನ್ನು ಬಲಪಡಿಸಲು ಸಾಧ್ಯ ಎಂದು ಅವರು ತಿಳಿಸಿದರು.
ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳ ಜನವಿರೋಧಿ ಕಾರ್ಯವಿಧಾನವನ್ನು ಟೀಕಿಸಿದ ಅವರು, ಪ್ರಮುಖ ಸುಧಾರಣೆಗಳಿಗೆ ಅವರು ಪದೇ ಪದೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಂತಹ ಶಾಸನವನ್ನು ಬೆಂಬಲಿಸಲು ಅವರು ನಿರಾಕರಿಸುತ್ತಿದ್ದಾರೆ. ಇದು ಸರಿಯಲ್ಲ ಎಂದು ಟೀಕಿಸಿದರು. ರಾಷ್ಟ್ರದ ಯುವಜನರ ಹಿತಾಸಕ್ತಿಗಳನ್ನು ಕಾಪಾಡುವ ಮತ್ತು ಆಡಳಿತವನ್ನು ಬಲಪಡಿಸುವ ಬದ್ಧತೆಯ ಕೊರತೆಯನ್ನು ಇದು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.

ಪರಿಶೀಲನೆಯ ಸಮಯದಲ್ಲಿ ಡಾ. ಸುಧಾಕರ ರೆಡ್ಡಿ ಅವರು, ಜಿಲ್ಲೆಯಾದ್ಯಂತ ಆಗಿರುವ ಪ್ರಗತಿಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ಪಕ್ಷದ ಕಾರ್ಯಕರ್ತರು ಮತ್ತು ಚುನಾವಣಾ ಸ್ವಯಂಸೇವಕರ ಸಮರ್ಪಿತ ಪ್ರಯತ್ನಗಳನ್ನು ಅವರು ಶ್ಲಾಘಿಸಿದರು. ಚುನಾವಣಾ ಆಯೋಗದ ಮಾರ್ಗಸೂಚಿಗಳಿಗೆ ಅನುಸಾರವಾಗಿ ಪ್ರತಿಯೊಬ್ಬ ಅರ್ಹ ನಾಗರಿಕನು ಮತದಾರರ ಪಟ್ಟಿಯಲ್ಲಿ ದಾಖಲಾಗುವುದನ್ನು ಖಚಿತಪಡಿಸಿಕೊಳ್ಳಲು ಬಿಜೆಪಿ ಬೂತ್ ಮಟ್ಟದಲ್ಲಿ ಸಂಪೂರ್ಣ ಬೆಂಬಲವನ್ನು ನೀಡುತ್ತದೆ ಎಂದು ಹೇಳಿದರು.
ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಅರ್ಹ ಮತದಾರರಿಗೆ ನೆರವಾಗಲು ಸೂಚಿಸಿದರು. ಕಾರ್ಯಕರ್ತರು ತಳಮಟ್ಟದಲ್ಲಿ ಸಮರ್ಪಣಾ ಭಾವದಿಂದ ಕೆಲಸ ಮಾಡುವಂತೆ ಸಲಹೆ ನೀಡಿದರು. ಅರ್ಹ ಮತದಾರರಿಗೆ ಸಹಾಯ ಮಾಡಲು ಅವರು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರಿಗೆ ಕರೆ ನೀಡಿದರು.
ಸಭೆಯಲ್ಲಿ ಸಂಸತ್ ಸದಸ್ಯ ಯಧುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಟಿ.ಎಸ್. ಶ್ರೀವತ್ಸ, ಬಿಜೆಪಿ ಮೈಸೂರು ನಗರ ಜಿಲ್ಲಾಧ್ಯಕ್ಷ ನಾಗೇಂದ್ರ, ಬಿಎಲ್‍ಎ-1ಗಳು, ಬಿಎಲ್‍ಎ-2ಗಳು, ವಿಧಾನಸಭಾ ಉಸ್ತುವಾರಿಗಳು ಮತ್ತು ಬಿಜೆಪಿ

ಹೆಚ್ಚಿನ ಸುದ್ದಿ