Friday, June 19, 2026
Homeರಾಜ್ಯಯುವ ಕಾಂಗ್ರೇಸ್ ಪಕ್ಷದ ಪ್ರ.ಕಾರ್ಯದರ್ಶಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ರಫೀಕ್‌ ಶಿರೋಳ...!

ಯುವ ಕಾಂಗ್ರೇಸ್ ಪಕ್ಷದ ಪ್ರ.ಕಾರ್ಯದರ್ಶಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ರಫೀಕ್‌ ಶಿರೋಳ…!

ಮುದ್ದೇಬಿಹಾಳ:
ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರಿಗೆ ಸಚವ ಸ್ಥಾನ ನಿಡಬೇಕೆಂದು ಆಗ್ರಹಿಸಿ ಶುಕ್ರವಾರ ನಡೆದ ಮುದ್ದೇಬಿಹಾಳ ಬಂದ್ ಪ್ರತಿಭಟನೆ ವೇಳೆಯಲ್ಲಿ ವಿಜಯಪುರ ಜಿಲ್ಲಾ ಯುವ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದ ರಫೀಕ ಶಿರೋಳ ಅವರು ಯುವ ಕಾಂಗ್ರೇಸ್ ಜಿಲ್ಲಾಧ್ಯಕ್ಷ ಮೊಹೀನ ಶೇಖ ಅವರಿಗೆ ಪಕ್ಷದಲ್ಲಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ಅಪ್ಪಾಜಿ ಸಿ.ಎಸ್.ನಾಡಗೌಡ ಅವರ ಅಭಿಮಾನವನ್ನು ಮೆರೆದಿದ್ದಾರೆ.


ಮುಂದಿನ ದಿನಗಳಲ್ಲಿ ನಾಡಗೌಡ ಅವರಿಗೆ ಸಚಿವ ಸ್ಥಾನ ಸಿಗದಿದ್ದರೆ ಪಕ್ಷದಲ್ಲಿರುವ ಎಲ್ಲಾ ಪದಾಧಿಕಾರಿಗಳೂ ರಾಜಿನಾಮೆಯನ್ನು ನೀಡುವಲ್ಲಿ ಹಿಂದೇಟು ಹಾಕುವುದಿಲ್ಲ ಎನ್ನುವುದು ಕಾಂಗ್ರೇಸ್ ಪಕ್ಷದ ವರಿಷ್ಠರು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಹೆಚ್ಚಿನ ಸುದ್ದಿ