Saturday, June 27, 2026
Homeರಾಜ್ಯವಸತಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ: ಸಿಎಂ ಡಿ.ಕೆ.ಶಿವಕುಮಾರ್...!!!

ವಸತಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ: ಸಿಎಂ ಡಿ.ಕೆ.ಶಿವಕುಮಾರ್…!!!

ಬೆಂಗಳೂರು 23:

ರಾಜ್ಯಾದ್ಯಂತ ವಸತಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ಎದುರಾಗುತ್ತಿದ್ದ ಪ್ರಮುಖ ಸಮಸ್ಯೆಯನ್ನು ನಿವಾರಿಸಲು ರಾಜ್ಯ ಸರ್ಕಾರವು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.

ಜೂನ್‌ 20ರಂದು ಮುಖ್ಯಮಂತ್ರಿ ಶ್ರೀ ಡಿ.ಕೆ.ಶಿವಕುಮಾರ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದಲ್ಲಿ ತೀರ್ಮಾನಿಸಿದಂತೆ, ನಿರ್ದಿಷ್ಟ ಮಿತಿಯೊಳಗಿನ ವಸತಿ ಕಟ್ಟಡಗಳಿಗೆ ವಿದ್ಯುತ್‌ ಸಂಪರ್ಕ ಪಡೆಯಲು ಒಸಿ ನಿಯಮದಿಂದ ಒಂದು ಬಾರಿಯ ವಿನಾಯಿತಿ ನೀಡಿ ಆದೇಶಿಸಲಾಗಿದೆ.

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿ, ಮಹಾನಗರ ಪಾಲಿಕೆಗಳು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿ ಸೇರಿದಂತೆ ಇಡೀ ರಾಜ್ಯಕ್ಕೆ ಅನ್ವಯವಾಗಲಿದೆ.

ಸರ್ಕಾರಿ ಆದೇಶ ಬಂದ ದಿನದಿಂದ ಅಂದರೆ, ಜೂನ್ 22, 2026 ರಿಂದ ಮುಂದಿನ 15 ದಿನಗಳವರೆಗೆ ಮಾತ್ರ ಹೊಸದಾಗಿ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ಇರಲಿದೆ. 2,400 ಚ.ಅಡಿ (+20% ವಿನಾಯಿತಿಯೊಂದಿಗೆ) ನಿವೇಶನಗಳಲ್ಲಿ ನಿರ್ಮಿಸಲಾಗಿರುವ ಜಿ+3 ಅಂತಸ್ತಿನ ವಸತಿ ಕಟ್ಟಡಗಳು ಅಥವಾ ಸ್ಟಿಲ್ಟ್‌ ಪಾರ್ಕಿಂಗ್‌ + 4 ಮಹಡಿಗಳನ್ನು ಹೊಂದಿರುವ ವಸತಿ ಕಟ್ಟಡಗಳಿಗೆ ಮಾತ್ರವಲ್ಲದೇ, ​ರೈತರು ವಾಸಿಸುವ ಮನೆ, ತೋಟದ ಮನೆ, ​ಕೃಷಿ ಉಪಕರಣಗಳನ್ನಿಡುವ ಮನೆ, ​ದನದ ಕೊಟ್ಟಿಗೆ ಹಾಗೂ ರೇಷ್ಮೆ ಗೂಡಿನ ಮನೆಗಳಿಗೂ ಒಸಿ ವಿನಾಯಿತಿ ಅನ್ವಯವಾಗಲಿದೆ.

ಹೆಚ್ಚಿನ ಸುದ್ದಿ