Friday, June 19, 2026
Homeಟಾಪ್ ನ್ಯೂಸ್ವಾಣಿಜ್ಯ ತೆರಿಗೆ ಅಧಿಕಾರಿ-ಸಿಬ್ಬಂದಿ ಯು.ಪಿ.ಐ.ಗೆ ಸಂಬಂಧಿಸಿದ ವಿಚಾರದಲ್ಲಿ ಲಂಚಕ್ಕಾಗಿ ಬೇಡಿಕೆ ಇಟ್ಟಲ್ಲಿ ತಕ್ಷಣ ಸಹಾಯವಾಣಿ ಸಂಖ್ಯೆಗೆ...

ವಾಣಿಜ್ಯ ತೆರಿಗೆ ಅಧಿಕಾರಿ-ಸಿಬ್ಬಂದಿ ಯು.ಪಿ.ಐ.ಗೆ ಸಂಬಂಧಿಸಿದ ವಿಚಾರದಲ್ಲಿ ಲಂಚಕ್ಕಾಗಿ ಬೇಡಿಕೆ ಇಟ್ಟಲ್ಲಿ ತಕ್ಷಣ ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಿ

ಬೆಂಗಳೂರು, ಜುಲೈ19 : ದೃಶ್ಯ ಮಾಧ್ಯಮಗಳಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿ /ಸಿಬ್ಬಂದಿಯವರು ಯು.ಪಿ.ಐ.ಗೆ ಸಂಬಂಧಿಸಿದ ವಿಚಾರದಲ್ಲಿ ಲಂಚಕ್ಕಾಗಿ ಬೇಡಿಕೆ ಇಟ್ಟಿರುತ್ತಾರೆಂದು ಪ್ರಸಾರವಾಗಿರುತ್ತದೆ.

ಕೆಲವು ಮಧ್ಯವರ್ತಿಗಳು ವರ್ತಕರಿಗೆ ಸಹಾಯ ಮಾಡುವ ನೆಪದಲ್ಲಿ ಹಣಕ್ಕೆ ಬೇಡಿಕೆ ಇಡುತ್ತಿರುವುದು ಕೂಡ ಇಲಾಖೆಯ ಗಮನಕ್ಕೆ ಬಂದಿರುತ್ತದೆ.

ಇಲಾಖೆಯು ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದು ತಪ್ಪಿತಸ್ಸ ಅಧಿಕಾರಿ/ಸಿಬ್ಬಂದಿ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳವುದಕ್ಕೆ ವಾಣಿಜ್ಯ ತೆರಿಗೆ ಇಲಾಖೆ ಬದ್ಧವಾಗಿರುತ್ತದೆ.

ವ್ಯಾಪಾರಸ್ಥರು ಇಂತಹ ಪ್ರಕರಣಗಳನ್ನು ತಕ್ಷಣ ವಾಣಿಜ್ಯ ತೆರಿಗೆ ಇಲಾಖೆಯ ಗಮನಕ್ಕೆ ತರಲು
ಸಹಾಯವಾಣಿ ದೂರವಾಣಿ ಸಂಖ್ಯೆ: 1800 425 6300 (ಸಮಯ ಬೆಳಿಗ್ಗೆ 8.00 ಗಂಟೆಯಿಂದ ರಾತ್ರಿ 8.00 ಗಂಟೆಯವರೆಗೆ ರಜಾದಿನಗಳನ್ನು ಹೊರತುಪಡಿಸಿ) ಸಂಪರ್ಕಿಸುವಂತೆ ಬೆಂಗಳೂರಿನ ವಾಣಿಜ್ಯ ತೆರಿಗೆ ಇಲಾಖೆ ಕೇಂದ್ರ ಕಚೇರಿ-1ರ ಅಪರ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಸುದ್ದಿ