ಕೇಂದ್ರದ ಮಾಜಿ ಸಚಿವರು ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಅಧ್ಯಕ್ಷತೆಯ ಸಿದ್ಧಸಿರಿ ಸೌಹಾರ್ದ ಸಹಕಾರಿ ಸಂಘ ನಿಯಮಿತದಿಂದ ವಿಜಯಪುರ ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಸಂಚಾರ ಕಮಾಂಡ್ ಕೇಂದ್ರ ಸ್ಥಾಪಿಸಲು ರೂ.25 ಲಕ್ಷ ದೇಣಿಗೆ ಚೆಕ್ಕನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರಿಗೆ ಇಂದು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಸಿದ್ಧಸಿರಿ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕ ಹಾಗೂ ಮಾಜಿ ಜಿಪಂ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ನಿರ್ದೇಶಕ ಜಗದೀಶ ಕ್ಷತ್ರಿ, ವ್ಯವಸ್ಥಾಪಕ ನಿರ್ದೇಶಕ ಜೋತಿಬಾ ಖಂಡಾಗಳೆ, ಮಹಾ ಪ್ರಬಂಧಕರು ಉಮೇಶ ಹಾರಿವಾಳ ಸೇರಿದಂತೆ ಇತರರಿದ್ದರು.
