Monday, October 13, 2025
Homeಜಿಲ್ಲಾ ಸುದ್ದಿಗಳುಸಿಡಿಲು ಬಡಿದು ಕುರಿಗಾಹಿ ಯುವಕ ಸಾವು

ಸಿಡಿಲು ಬಡಿದು ಕುರಿಗಾಹಿ ಯುವಕ ಸಾವು

ಸುರಪುರ ಸುದ್ದಿ : ಇಂದು ಸಾಯಂಕಾಲ ಸಮಯದಲ್ಲಿ ಸುರಿದ ಮಳೆ ಹಿನ್ನೆಲೆಯಲ್ಲಿ ಸಿಡಿಲು ಬಡಿದು ಕುರಿಗಾಹಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಪೇಠ ಅಮ್ಮಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಾಳ ಅಮ್ಮಾಪೂರ ಗ್ರಾಮದ ಕುರಿಗಾಹಿ ಯುವಕ ಮರೆಪ್ಪ ತಂ/ಅಯ್ಯಪ್ಪ ದೇವಡಿ (21) ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಸುರಪುರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,
ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹೆಚ್ಚಿನ ಸುದ್ದಿ