Monday, October 13, 2025
Homeಜಿಲ್ಲಾ ಸುದ್ದಿಗಳುಸೆ.28 ರಂದು ಬಣಜಿಗ ಸಮಾಜದಿಂದ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರ ಸನ್ಮಾನ ಸಮಾರಂಭ...!!!

ಸೆ.28 ರಂದು ಬಣಜಿಗ ಸಮಾಜದಿಂದ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರ ಸನ್ಮಾನ ಸಮಾರಂಭ…!!!

ಮುದ್ದೇಬಿಹಾಳ:

ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು ಮುದ್ದೇಬಿಹಾಳ ಘಟಕದಿಂದ ನೂತನ ಪದಾಧಿಕಾರಿಗಳ ಪದಗ್ರಹಣ, ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರ ಸನ್ಮಾನ ಸಮಾರಂಭವನ್ನು ಇಂದು ಸೆ.28 ರವಿವಾರ ಬೆಳಿಗ್ಗೆ 10 ಗಂಟೆಗೆ ವಿಜಯ ಮಹಾಂತೇಶ ಮಂಗಲ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ಸಂಘದ ಕಾರ್ಯದಶಿ ರಾಜು ಬಳ್ಳೊಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಮಾರಂಭದ ದಿವ್ಯ ಸಾನಿಧ್ಯವನ್ನು ಹುನಗುಂದ ಗಚ್ಚಿನಮಠ ಹಾಗೂ ಮುದ್ದೇಬಿಹಾಳ ಹೊಸಮಠದ ಅಮರೇಶ್ವರ ದೇವರು ವಹಿಸುವರು. ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ ಶೆಟ್ಟರ ಉದ್ಘಾಟನೆ ನೆರವೇರಿಸುವರು. ಸಮಾಜದ ತಾಲೂಕಾಧ್ಯಕ್ಷ ಅಶೋಕ ಚಟ್ಟೇರ ಅಧ್ಯಕ್ಷತೆ ವಹಿಸುವರು. ಶಾಸಕ ಹಾಗೂ ರಾಜ್ಯ ಸಾಬೂನು ಹಾಗೂ ಮಾರ್ಜಕ ಮಂಡಳಿ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಬಸವ ಭಾವ ಪೂಜೆ ಸಲ್ಲಿಸಲಿದ್ದು, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅಕ್ಕಮಹಾದೇವಿ ಭಾವ ಪೂಜೆ ಸಲ್ಲಿಸುವರು ಎಂದು ತಿಳಿಸಿದ್ದಾರೆ.

ಕಾರ್ಯಕ್ರಮಕ್ಕೆ ಮಾಜಿ ಶಾಸಕ, ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ, ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪೂರ, ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ರೂಡಗಿ, ಮಾಜಿ ಜಿಪಂ ಅಧ್ಯಕ್ಷ ಪ್ರಭುಗೌಡ ದೇಸಾಯಿ, ಹೊಳೆ ಹುಚ್ಚೇಶ್ವರ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಹೊಳಬಸು ಶೆಟ್ಟರ, ಸಮಾಜ ಸಂಘದ ತಾಲೂಕು ಘಟಕದ ಗೌರವಾಧ್ಯಕ್ಷ ಎಂ. ಎಸ್. ನಾವದಗಿ, ನಿಕಟಪೂರ್ವ ಅಧ್ಯಕ್ಷ ಪ್ರಭುರಾಜ ಕಲಬುರ್ಗಿ, ಪ್ರಧಾನ ಕಾರ್ಯದರ್ಶಿ ಸಂಗಮೇಶ ನಾವದಗಿ ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಲು ಸಾಹಿತಿ ಅಶೋಕ ಹಂಚಲಿ ಆಗಮಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಹೆಚ್ಚಿನ ಸುದ್ದಿ