ಬೆಂಗಳೂರು: ದಾಖಲೆಯಿಲ್ಲದೇ ಸಾಗಿಸಲಾಗುತ್ತಿದ್ದ ಎಂಟು ಕೆ.ಜಿ ಚಿನ್ನ ಹಾಗೂ 46.7 ಕೆ.ಜಿ ಬೆಳ್ಳಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಗರದ ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇವುಗಳ ಒಟ್ಟು ಮೊತ್ತ ಐದು ಕೋಟಿ ರೂ.ಗಳಿಗೂ ಹೆಚ್ಚು ಎಂದು ಅಂದಾಜು ಮಾಡಲಾಗಿದೆ.
ವಿವೇಕನಗರ ಠಾಣೆಯ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ಈಚರ್ ವಾಹನವೊಂದರಲ್ಲಿ ಚಿನ್ನಬೆಳ್ಳಿ ಸಾಗಿಸುತ್ತಿದ್ದವರು ಸಿಕ್ಕುಬಿದ್ದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದ್ದು, ಚುನಾವಣಾಧಿಕಾರಿಗಳಿಗೆ ಈ ಕುರಿತು ಮಾಹಿತಿಯನ್ನೂ ನೀಡಲಾಗಿದೆ.