Tuesday, August 4, 2026
Homeಜಿಲ್ಲಾ ಸುದ್ದಿಗಳುಮುದ್ದೇಬಿಹಾಳ: ಅಲ್ಪ ಮಳೆಯಲ್ಲೇ ಕೆಸರುಮಯ ರಸ್ತೆ – ಪಾದಚಾರಿಗಳು, ವಾಹನ ಸವಾರರ ಪರದಾಟ

ಮುದ್ದೇಬಿಹಾಳ: ಅಲ್ಪ ಮಳೆಯಲ್ಲೇ ಕೆಸರುಮಯ ರಸ್ತೆ – ಪಾದಚಾರಿಗಳು, ವಾಹನ ಸವಾರರ ಪರದಾಟ

ಮುದ್ದೇಬಿಹಾಳ: ಪಟ್ಟಣದಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣಗೊಂಡಿದ್ದರೂ ಸ್ಥಳೀಯ ಪುರಸಭೆಯ ನಿರ್ಲಕ್ಷ್ಯದಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಅಲ್ಪ ಪ್ರಮಾಣದ ಮಳೆಯಾದರೂ ರಸ್ತೆಯಲ್ಲಿ ನೀರು ನಿಂತು ಕೆಸರುಮಯ ವಾತಾವರಣ ನಿರ್ಮಾಣವಾಗುತ್ತಿದ್ದು, ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ.

ಪಟ್ಟಣದ ರಾಣಿ ಚನ್ನಮ್ಮ ಮಹಾದ್ವಾರದ ಎದುರಿನ ರಸ್ತೆಯಲ್ಲಿ ಮಳೆ ನೀರು ನಿಂತಿರುವ ಪರಿಣಾಮ ಜನರು ಕೆಸರಿನಲ್ಲೇ ಓಡಾಡಬೇಕಾದ ದುಸ್ಥಿತಿ ಎದುರಾಗಿದೆ. ಈ ಭಾಗದಲ್ಲಿ ಸರಿಯಾದ ನೀರು ಹರಿದು ಹೋಗುವ ವ್ಯವಸ್ಥೆ ಇಲ್ಲದ ಕಾರಣ ಪ್ರತೀ ಮಳೆಯಲ್ಲೂ ಇದೇ ಸಮಸ್ಯೆ ಮರುಕಳಿಸುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಶಾಶ್ವತ ಪರಿಹಾರ ಕಲ್ಪಿಸಬೇಕು ಹಾಗೂ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಹೆಚ್ಚಿನ ಸುದ್ದಿ