ವಿಕಾಸಶೀಲ ಇನ್ಸಾನ್ ಪಾರ್ಟಿ ಕಲಬುರಗಿ ಜಿಲ್ಲಾಧ್ಯಕ್ಷರಾಗಿ ಶಾಂತಪ್ಪ ಕೂಡಿ ನೇಮಕ
ಕಲಬುರಗಿ: ವಿಕಾಸಶೀಲ ಇನ್ಸಾನ್ ಪಾರ್ಟಿ (VIP) ಕರ್ನಾಟಕ ರಾಜ್ಯ ಘಟಕವು ಕಲಬುರ್ಗಿಯ ಸಮಾಜಸೇವಕ ಶಾಂತಪ್ಪ ಕೂಡಿ ಅವರನ್ನು ಪಕ್ಷದ ಕಲಬುರಗಿ ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡಿದೆ.
ಈ ಕುರಿತು ಪಕ್ಷದ ರಾಜ್ಯಾಧ್ಯಕ್ಷ ಬಿ.ಕೆ. ಮೋಹನ್ ಕುಮಾರ್ ಅವರು ನೇಮಕಾತಿ ಆದೇಶ ಹೊರಡಿಸಿದ್ದು, ಸಮಾಜದ ಅಭಿವೃದ್ಧಿಗೆ ಶಾಂತಪ್ಪ ಕೂಡಿ ಅವರು ಸಲ್ಲಿಸಿರುವ ಸೇವೆ, ನಾಯಕತ್ವ ಹಾಗೂ ಸಮರ್ಪಣೆಯನ್ನು ಪರಿಗಣಿಸಿ ಈ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಶಾಂತಪ್ಪ ಕೂಡಿ ಅವರ ಮಾರ್ಗದರ್ಶನ ಹಾಗೂ ಅನುಭವದೊಂದಿಗೆ ಪಕ್ಷದ ಸಿದ್ಧಾಂತ, ತತ್ವಗಳು ಮತ್ತು ಶಿಸ್ತನ್ನು ಜನರಿಗೆ ತಲುಪಿಸುವ ಮೂಲಕ ಕಲಬುರ್ಗಿ ಜಿಲ್ಲೆಯಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲಾಗುವುದು ಎಂಬ ವಿಶ್ವಾಸವನ್ನು ಪಕ್ಷ ವ್ಯಕ್ತಪಡಿಸಿದೆ.
ನೇಮಕಾತಿಯ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಬಿ.ಕೆ. ಮೋಹನ್ ಕುಮಾರ್ ಅವರು ಶಾಂತಪ್ಪ ಕೂಡಿ ಅವರಿಗೆ ಅಭಿನಂದನೆ ಸಲ್ಲಿಸಿ, ಹೊಸ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ ಪಕ್ಷದ ಬೆಳವಣಿಗೆಗೆ ಶ್ರಮಿಸುವಂತೆ ಶುಭ ಹಾರೈಸಿದ್ದಾರೆ.
ಈ ನೇಮಕಾತಿಯಿಂದ ವಿಕಾಸಶೀಲ ಇನ್ಸಾನ್ ಪಾರ್ಟಿಯ ಸಂಘಟನೆ ಕಲಬುರ್ಗಿ ಜಿಲ್ಲೆಯಲ್ಲಿ ಇನ್ನಷ್ಟು ವಿಸ್ತಾರಗೊಂಡು ಜನಸೇವಾ ಕಾರ್ಯಗಳಿಗೆ ವೇಗ ಸಿಗಲಿದೆ ಎಂಬ ವಿಶ್ವಾಸವನ್ನು ಪಕ್ಷದ ಮುಖಂಡರು ವ್ಯಕ್ತಪಡಿಸಿದ್ದಾರೆ.
