Tuesday, October 7, 2025
Homeದೇಶಬಾಲಕಿಯನ್ನು ಕೊಂದು ಮೃತದೇಹವನ್ನು ತುಂಡುತುಂಡಾಗಿ ಕತ್ತರಿಸಿದ ದುಷ್ಕರ್ಮಿ

ಬಾಲಕಿಯನ್ನು ಕೊಂದು ಮೃತದೇಹವನ್ನು ತುಂಡುತುಂಡಾಗಿ ಕತ್ತರಿಸಿದ ದುಷ್ಕರ್ಮಿ

ಜೈಪುರ: 9 ವರ್ಷದ ಬಾಲಕಿಯೊಬ್ಬಳನ್ನು ಹತ್ಯೆಗೈದಿರುವ ದುಷ್ಕರ್ಮಿಯೊಬ್ಬ, ಆಕೆಯ ಮೃತದೇಹವನ್ನು ತುಂಡುತುಂಡಾಗಿ ಕತ್ತರಿಸಿದ ಘಟನೆ ಜೈಪುರದ ಉದಯಪುರದಲ್ಲಿ ನಡೆದಿದೆ.

ಮೃತ ಒಂಬತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರಬಹುದಾದ ಸಾಧ್ಯತೆಯೂ ಇದೆ ಎಂದು ಪೊಲೀಸರು ತಿಳಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಕಮಲೇಶ್ ನನ್ನು ಬಂಧಿಸಲಾಗಿದೆ.

ಮಾರ್ಚ್ 29ರಂದು ಬಾಲಕಿ ನಾಪತ್ತೆಯಾಗಿದ್ದು, ಶನಿವಾರ ರಾತ್ರಿ ಮಾವ್ಲಿ ಎಂಬಲ್ಲಿ ಆಕೆಯ ಕತ್ತರಿಸಲ್ಪಟ್ಟ ಮೃತದೇಹ ಪತ್ತೆಯಾಗಿತ್ತು. ಯಾರು ವಾಸವಿರದ ಮನೆಯಿಂದ ಕೆಟ್ಟ ವಾಸನೆ ಬರುತ್ತಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ ಮೇಲೆ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹೆಚ್ಚಿನ ಸುದ್ದಿ