Monday, October 13, 2025
Homeಚುನಾವಣೆ 2023ಡಿಕೆ ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲು

ಡಿಕೆ ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲು

ಮಂಡ್ಯ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವಿರುದ್ಧ ನಗರದ ಗ್ರಾಮಾಂತರ ಠಾಣೆಯಲ್ಲಿ ಭಾನುವಾರ ಎಫ್‌ಐಆರ್ ದಾಖಲಾಗಿದೆ.

ಕಾಂಗ್ರೆಸ್‌ ಪ್ರಜಾಧ್ವನಿ ಯಾತ್ರೆಯ ಸಂದರ್ಭದಲ್ಲಿ ಕಲಾವಿದರತ್ತ 500 ರೂ. ನೋಟಿನ ಕಂತೆ ಎಸೆದಿದ್ದರು. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಮಾರ್ಚ್‌ 28ರಂದು ಶ್ರೀರಂಗಪಟ್ಟಣ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್‌ ಪ್ರಜಾಧ್ವನಿ ಯಾತ್ರೆ ಆಯೋಜನೆಗೊಂಡಿತ್ತು. ತಾಲ್ಲೂಕಿನ ಕ್ಯಾತುಂಗೆರೆಯಿಂದ ಡಿ.ಕೆ.ಶಿವಕುಮಾರ್‌ ಅವರು ರೋಡ್‌ ಶೋ ಆರಂಭಿಸಿದ್ದರು. ಈ ವೇಳೆ ಜಾನಪದ ಕಲಾ ತಂಡಗಳ ಕಲಾವಿದರು ಡಿಕೆಶಿ ಅವರನ್ನು ಹಣ ಕೊಡುವಂತೆ ಕೋರಿದ್ದರು. ಈ ಸಂದರ್ಭದಲ್ಲಿ ಅವರು ಕಲಾವಿದರತ್ತ ಹಣದ ಕಟ್ಟು ಎಸೆದಿದ್ದರು.

ನಂತರ ಹಣದ ಕಟ್ಟು ಎಸೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಇದರ ವಿರುದ್ಧ ಚುನಾವಣೆ ಸೆಕ್ಟರ್ ಅಧಿಕಾರಿ ಜೆಎಂಎಫ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲು ಮಾಡಿದ್ದರು.

ಪ್ರಕರಣದ ತನಿಖೆ ನಡೆಸುವಂತೆ ನ್ಯಾಯಾಲಯ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಏ.2ರಂದು ಗ್ರಾಮಾಂತರ ಠಾಣೆ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದಾರೆ.

ಹೆಚ್ಚಿನ ಸುದ್ದಿ