Wednesday, June 17, 2026
Homeಚುನಾವಣೆ 2023ಟಿಕೆಟ್‌ ಹಂಚಿಕೆ ಸಭೆಗಿಲ್ಲ ಬಿಎಸ್‌ವೈಗೆ ಎಂಟ್ರಿ: ಕಾಂಗ್ರೆಸ್‌ ವ್ಯಂಗ್ಯ

ಟಿಕೆಟ್‌ ಹಂಚಿಕೆ ಸಭೆಗಿಲ್ಲ ಬಿಎಸ್‌ವೈಗೆ ಎಂಟ್ರಿ: ಕಾಂಗ್ರೆಸ್‌ ವ್ಯಂಗ್ಯ

ಬಿಎಸ್‌ವೈಯನ್ನು ‘ಟಿಶ್ಯೂ‘ ಪೇಪರ್‌ ರೀತಿಯಲ್ಲಿ ಬಳಸಿ ಬಿಜೆಪಿ ನಾಯಕರು ಅವಮಾನ ಮಾಡಿದ್ದಾರೆ ಎಂದು ಕಾಂಗ್ರೆಸ್‌ ಹೇಳಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಸಭೆಯಲ್ಲಿ ಜೆ ಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್‌ ಶಾ ನೇತೃತ್ವದಲ್ಲಿ ಸೋಮವಾರ ದೆಹಲಿಯಲ್ಲಿ ಸಭೆ ನಡೆದಿದ್ದು, ಯಡಿಯೂರಪ್ಪನವರನ್ನು ಹೊರಗಿಟ್ಟು ಸಭೆ ನಡೆಸಲಾಗಿತ್ತು. ಇದನ್ನು ಉಲ್ಲೇಖಿಸಿ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಹರಿಹಾಯ್ದಿದೆ.

ಬಿಎಸ್‌ವೈ ಅವರನ್ನೇ ಹೊರಗಿಟ್ಟು ಇತರೇ ರಾಜ್ಯ ನಾಯಕರೊಂದಿಗೆ ಸಭೆ ನಡೆಸಿದ್ದು ಲಿಂಗಾಯತ ಸಮುದಾಯದ ಹಿರಿಯ ನಾಯಕನಿಗೆ ಮಾಡಿದ ಘೋರ ಅವಮಾನ. ಕರ್ನಾಟಕದಲ್ಲಿ ಬಿಜೆಪಿ ಕಟ್ಟಿದ ಬಿಎಸ್‌ವೈ ಅವರಿಗೆ ಸಭೆಯಲ್ಲಿ ಕುರ್ಚಿ ಇರಲಿಲ್ಲವೇ? ಟಿಕೆಟ್ ನಿರ್ಧರಿಸುವ ಸ್ವತಂತ್ರವಿಲ್ಲವೇ? ಬಿಎಸ್‌ವೈ ಅವರು ಬಿಜೆಪಿ ಬಳಸಿ ಬಿಸಾಡುವ ಟಿಶ್ಯೂ ಪೇಪರ್ ಆಗಿದ್ದಾರೆ‘ ಎಂದು ಕಾಂಗ್ರೆಸ್ ಟ್ವೀಟ್‌ ಮಾಡಿದೆ.

ಹೆಚ್ಚಿನ ಸುದ್ದಿ