ನವದೆಹಲಿ: ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಶಾಲೆಯೊಂದರಿಂದ ವಿದ್ಯಾರ್ಥಿಗಳನ್ನು ತೆರವುಗೊಳಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಸಾದಿಕ್ ನಗರದ ಇಂಡಿಯನ್ ಪಬ್ಲಿಕ್ ಶಾಲೆಗೆ ಬೆಳಗ್ಗೆ 10:49ಕ್ಕೆ ಇಮೇಲ್ ಒಂದು ಬಂದಿದ್ದು, ಶಾಲೆಯ ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂದು ಇಮೇಲ್ ನಲ್ಲಿ ತಿಳಿಸಲಾಗಿತ್ತು. ಕೂಡಲೇ ಶಾಲೆಯಲ್ಲಿದ್ದ ಮಕ್ಕಳನ್ನು ತೆರವುಗೊಳಿಸಲಾಗಿದೆ.
ವಿಷಯ ತಿಳಿದ ತಕ್ಷಣದ ಮಕ್ಕಳ ಪೋಷಕರು, ಮನೆಯವರು ಶಾಲೆಯ ಕಡೆಗೆ ಧಾವಿಸಿ ಬಂದಿದ್ದಾರೆ. “ನಮ್ಮ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುವಂತೆ ಶಾಲೆಯಿಂದ ನಮಗೆ ಸಂದೇಶ ಬಂದಿದೆ” ಎಂದು ಪೋಷಕರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
’’ಈ ಶಾಲೆಗೆ ಬಾಂಬ್ ಬೆದರಿಕೆ ಬಂದಿರುವುದು ಇದೇ ಮೊದಲಲ್ಲ. ಕಳೆದ ವರ್ಷ ನವೆಂಬರ್‌ನ ನಲ್ಲಿ ಅನಾಮಿಕ ವ್ಯಕ್ತಿಯಿಂದ ಇದೇ ರೀತಿಯ ಇಮೇಲ್ ಬಂದಿತ್ತು. ನಮ್ಮ ತಂಡಗಳು ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳದೊಂದಿಗೆ ಸ್ಥಳದಲ್ಲಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಚಂದನ್ ಚೌಧರಿ ಮಾಹಿತಿ ನೀಡಿದ್ದಾರೆ.
