ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಬುಧವಾರ ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದಾರೆ.
2024ರ ಲೋಕಸಭಾ ಚುನಾವಣೆಗೆ ಮುನ್ನ ವಿರೋಧ ಪಕ್ಷಗಳ ಒಗ್ಗಟ್ಟಿನ ಹಿನ್ನೆಲೆಯಲ್ಲಿ ಈ ಸಭೆ ಮೊದಲ ಹೆಜ್ಜೆಯಾಗಲಿದೆ ಎನ್ನಲಾಗಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಂಗಳವಾರ ಜಾರಿ ನಿರ್ದೇಶನಾಲಯ (ಇಡಿ) ಮುಂದೆ ವಿಚಾರಣೆಗೆ ಹಾಜರಾಗಿದ್ದ ತೇಜಸ್ವಿ ಯಾದವ್ ದೆಹಲಿಯಲ್ಲಿದ್ದರು.
ಈ ಭೇಟಿಯನ್ನು ‘ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ತೆಗೆದುಕೊಂಡ ಐತಿಹಾಸಿಕ ಹೆಜ್ಜೆ’ ಎಂದು ಹೇಳಿದ ರಾಹುಲ್ ಗಾಂಧಿ, “ಇದು ಒಂದು ಪ್ರಕ್ರಿಯೆ, ದೇಶದ ಅಭಿವೃದ್ಧಿಯ ದೃಷ್ಟಿಯಿಂದ ಪ್ರತಿಪಕ್ಷಗಳ ದೃಷ್ಟಿಕೋನ ಬೆಳೆಯುತ್ತಿದೆ” ಎಂದು ಹೇಳಿದರು.
