ಪಾಟ್ನಾ: ಬಿಜೆಪಿ ರಾಜ್ಯಸಭಾ ಸದಸ್ಯ ಸುಶೀಲ್ ಕುಮಾರ್ ಮೋದಿ ಅವರು ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಏಪ್ರಿಲ್ 25 ರಂದು ಬಿಹಾರದ ರಾಜಧಾನಿ ಪಾಟ್ನಾದ ನ್ಯಾಯಾಲಯಕ್ಕೆ ಹಾಜರಾಗುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್ ನೀಡಿದೆ.
2019 ರಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ‘ಮೋದಿ ಉಪನಾಮ’ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ.
ಇದೇ ಹೇಳಿಕೆಗೆ ಸಂಬಂಧಿಸಿ ಪೂರ್ಣೇಶ್ ಮೋದಿ ಎಂಬವರು ಸೂರತ್ ಕೋರ್ಟ್ ಮೆಟ್ಟಿಲೇರಿದ್ದರು. ಇತ್ತೀಚೆಗಷ್ಟೇ ಸೂರತ್ ನ್ಯಾಯಾಲಯವು ಇದೇ ಹೇಳಿಕೆಗಾಗಿ ರಾಹುಲ್ ರನ್ನು ದೋಷಿ ಎಂದು ಘೋಷಿಸಿತು ಮತ್ತು ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.
ಸದ್ಯ ರಾಹುಲ್ ಜಾಮೀನಿನ ಮೇಲೆ ಹೊರಗಿದ್ದಾರೆ. ಇದಾದ ಬಳಿಕ ರಾಹುಲ್ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು.
