ರಾಮನಗರ: ಕುಂಬಳಗೋಡಿನಲ್ಲಿರುವ ಕೆಮಿ ಟ್ರೇಡ್ ಕಾರ್ಪೋರೇಷನ್ ಎಂಬ ರಾಸಾಯನಿಕ ಕಾರ್ಖಾನೆಗೆ ಬೆಂಕಿ ಬಿದ್ದಿರುವ ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ಅವಘಡಕ್ಕೆ ಕಾರಣ ಎನ್ನಲಾಗಿದ್ದು, ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಘಟನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಕೆಮಿಕಲ್ ಪದಾರ್ಥಗಳು ಬೆಂಕಿಗೆ ಆಹುತಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ವರದಿಯಾಗಿಲ್ಲ. ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.