Monday, March 2, 2026
Homeಟಾಪ್ ನ್ಯೂಸ್ಅಂಬೇಡ್ಕರ್ ಜಯಂತಿ: ಜಯ್ ಭೀಮ್ ಘೋಷಣೆ ಕೂಗಿದ ಸಿಎಂ ಬೊಮ್ಮಾಯಿ

ಅಂಬೇಡ್ಕರ್ ಜಯಂತಿ: ಜಯ್ ಭೀಮ್ ಘೋಷಣೆ ಕೂಗಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ  ವಿಧಾನಸೌಧದ ಆವರಣದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಜಯ್ ಭೀಮ್ ಎಂದು ಘೋಷಣೆ ಕೂಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುಷ್ಪನಮನ ಸಲ್ಲಿಸಿದ್ದಾರೆ.

ಇದಕ್ಕೂ ಮುನ್ನ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದ ಸಿಎಂ ಬೊಮ್ಮಾಯಿ, ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ||ಬಿ.ಆರ್.ಅಂಬೇಡ್ಕರ್ ರವರ ಜನ್ಮ ಸ್ಮರಣೆಯಂದು ಅವರಿಗೆ ಗೌರವಪೂರ್ವಕ ನಮನಗಳು. ಸಮಾಜದಲ್ಲಿ ಸಮಾನತೆಯನ್ನು ಪ್ರತಿಪಾದಿಸುವ ಜತೆಗೆ ಶೋಷಿತ ಸಮುದಾಯಗಳ ಏಳಿಗೆಗಾಗಿ ನಿರಂತರವಾಗಿ ಶ್ರಮಿಸಿದ ಡಾ.ಅಂಬೇಡ್ಕರ್ ರವರ ಸಾಧನೆ ಹಾಗೂ ದೇಶ ನಿರ್ಮಾಣಕ್ಕೆ ಅವರು ನೀಡಿದ ಕೊಡುಗೆ ಸದಾ ಸ್ಮರಣೀಯವಾಗಿರುತ್ತದೆ ಎಂದು ಹೇಳಿದಾರೆ.

ಹೆಚ್ಚಿನ ಸುದ್ದಿ