ಬೆಳಗಾವಿ: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಇಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಅಥಣಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿದ್ದ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಶುಕ್ರವಾರ ಕೇಸರಿ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್ ಸೇರಿದ ಬಳಿಕ ಮಾತನಾಡಿದ ಸವದಿ, ನಾನು ಸೋತರು ನನಗೆ ಉಪಮುಖ್ಯಮಂತ್ರಿ ಸ್ಥಾನ ಕೊಟ್ಟಿದ್ರು. ಅದನ್ನ ಮರೆತು ಈಗ ಪಕ್ಷ ಬಿಡುತ್ತಿದ್ದಾರೆ ಅಂತಾ ಟೀಕೆ ಮಾಡುತ್ತಿದ್ದಾರೆ. ಆದರೆ ಹೈಕಮಾಂಡ್ ನಾಯಕರು ಒಂದು ವಚನ ಕೊಟ್ಟಿದ್ದರು. ಚುನಾವಣೆಗೆ ಅಥಣಿಯಿಂದ 2023ಕ್ಕೆ ಟಿಕೆಟ್ ನೀಡುತ್ತೇನೆ ಎಂದಿದ್ದರು. ಆದರೆ ಯಾವುದೇ ಮಾಹಿತಿ ಇಲ್ಲದೆ ನನ್ನನ್ನ ಉಪಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದರು. ಯಾವುದೇ ಜವಾಬ್ದಾರಿಯನ್ನು ನೀಡಲಿಲ್ಲ ಎಂದು ಕಿಡಿಕಾರಿದರು.
ಇಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಇಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್, ಪಕ್ಷದ ಚಿಕ್ಕೋಡಿ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಹಾಜರಿದ್ದರು.
