ಬೆಂಗಳೂರು: ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಷರತ್ತುಬದ್ಧ ಜಾಮೀನು ಮಂಜೂರು ಆಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 5 ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿದೆ.
5 ಲಕ್ಷ ರೂಪಾಯಿ ಬಾಂಡ್, ಇಬ್ಬರ ಶ್ಯೂರಿಟಿ ನೀಡುವಂತೆ ಸೂಚನೆ ನೀಡಲಾಗಿದೆ. ಮೂರು ವಾರಗಳಿಗೊಮ್ಮೆ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಬೇಕು. ತನಿಖಾಧಿಕಾರಿಗಳಿಗೆ ಪಾಸ್ಪೋಟ್ ಒಪ್ಪಿಸಬೇಕು ಎಂದು ಆದೇಶ ನೀಡಲಾಗಿದೆ. KSDL ಗುತ್ತಿಗೆಯಲ್ಲಿ ಲಂಚ ಪಡೆದ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಜೈಲು ಸೇರಿದ್ದರು.
ಸಾಕ್ಷಿದಾರರಿಗೆ ಬೆದರಿಕೆ ಹಾಕಬಾರದು. ನ್ಯಾಯಾಲಯದ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಟ್ಟು ಹೋಗಬಾರದು ಎಂದು ನ್ಯಾಯಾಲಯ ಹೇಳಿದೆ.