Wednesday, April 15, 2026
Homeದೇಶಕೋರ್ಟ್ ಗೆ ಸುಳ್ಳು ಹೇಳಿಕೆ ನೀಡುತ್ತಿರುವ ಸಿಬಿಐ: ಕೇಜ್ರಿವಾಲ್ ಆರೋಪ

ಕೋರ್ಟ್ ಗೆ ಸುಳ್ಳು ಹೇಳಿಕೆ ನೀಡುತ್ತಿರುವ ಸಿಬಿಐ: ಕೇಜ್ರಿವಾಲ್ ಆರೋಪ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ನ್ಯಾಯಾಲಯಗಳಿಗೆ ಸುಳ್ಳು ಹೇಳಲಾಗುತ್ತಿದೆ. ಬಂಧಿಸಲ್ಪಟ್ಟವರಿಗೆ ಕಿರುಕುಳ ನೀಡಲಾಗುತ್ತಿದೆ ಮತ್ತು ಯಾವುದೇ ಆರೋಪಗಳಿಗೆ ಪುರಾವೆಗಳೇ ಇರುವುದಿಲ್ಲ ಎಂದು ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಸಮನ್ಸ್ ನೀಡಿದ ಒಂದು ದಿನದ ನಂತರ ಕೇಜ್ರಿವಾಲ್ ಈ ಹೇಳಿಕೆ ನೀಡಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕೇಜ್ರಿವಾಲ್, ಸಿಬಿಐ ಮತ್ತು ಇಡಿಯಂತಹ ಏಜೆನ್ಸಿಗಳನ್ನು ರಾಜಕೀಯ ವಿರೋಧಿಗಳನ್ನು ಗುರಿಯಾಗಿಸಲು ಬಳಸಲಾಗುತ್ತಿದೆ ಎಂದರು.

14 ಫೋನ್‌ಗಳನ್ನು ನಾಶಪಡಿಸಲಾಗಿದೆ ಎಂದು ಏಜೆನ್ಸಿಗಳು ಕೋರ್ಟ್ ಗೆ ಸುಳ್ಳು ಹೇಳಿಕೆ ನೀಡಿವೆ, ಅಫಿಡವಿಟ್‌ಗಳಲ್ಲಿ ನ್ಯಾಯಾಲಯಕ್ಕೆ ಸುಳ್ಳನ್ನು ಹೇಳಲಾಗುತ್ತಿದೆ. ‘ನಿಮ್ಮ ಮಗಳು ನಾಳೆ ಕಾಲೇಜಿಗೆ ಹೇಗೆ ಬರುತ್ತಾಳೆ ಎಂಬುದನ್ನು ನೋಡುತ್ತೇವೆ‘ ಎಂದು ಬೆದರಿಕೆ ಹಾಕಲಾಗುತ್ತಿದೆ ಎಂದವರು ಆರೋಪಿಸಿದರು.

ಹೆಚ್ಚಿನ ಸುದ್ದಿ