ವರುಣಾದಲ್ಲಿ 15 ವರ್ಷಗಳ ಅಪ್ಪ ಮಗನ ದರ್ಬಾರ್ಗೆ ಅಂತ್ಯ ಕಾಲ ಬಂದಿದೆ ಎಂದು ಸಂಸದ ಪ್ರತಾಪ ಸಿಂಹ ಹೇಳಿದ್ದಾರೆ. ಬಿಜೆಪಿ ಅಭ್ಯರ್ಥಿ ಸೋಮಣ್ಣ ಪರ ಸುದ್ದಿಗೋಷ್ಠೀಯಲ್ಲಿ ಮಾತನಾಡಿದ ಅವರು, ಸೋಮಣ್ಣನವರ ಬಗ್ಗೆ ಒಳ್ಳೆಯ ಅಭಿಪ್ರಾಯವಿದೆ. ಹಳೆ ಮೈಸೂರು ಭಾಗದಲ್ಲಿ 8ರಿಂದ 10 ಸ್ಥಾನ ಬಿಜೆಪಿಗೆ ಬರುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪಗಳ್ನು ಮಾಡಿದ ಪ್ರತಾಪ್ ಸಿಂಹ, “ಅಧಿಕಾರಕ್ಕೆ ಬರಲು ದೇಶದ್ರೋಹಿಗಳ ಜೊತೆಗೂ ಕಾಂಗ್ರೆಸ್ ಕೈಜೋಡಿಸುತ್ತಿದೆ. ಪಿಎಫ್ಐ, ಕೆಎಫ್ಡಿ, ಎಸ್ಡಿಪಿಐ ಸಂಘಟನೆಯ ಕಾರ್ಯಕರ್ತರು ಸಿದ್ದರಾಮಯ್ಯನವರಿಗೆ ದತ್ತು ಮಕ್ಕಳಿದ್ದಂತೆ” ಎಂದು ಹೇಳಿದ್ದಾರೆ.
ಪಿಎಫ್ಐ ಮತ್ತು ಕೆಎಫ್ಡಿಯನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಕರ್ನಾಟಕದಲ್ಲಿ ತಾಲಿಬಾನ್ ಸರ್ಕಾರ ತರಲು ಹೊರಟಿದ್ದಾರೆ. ಸಮಾಜಘಾತುಕ ಸಂಘಟನೆಯ ಬೆಂಬಲದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಎಸ್ಡಿಪಿಐ ಬೆಂಬಲ ಕೋರಿದ ಪರಮೇಶ್ ರನ್ನು ಟೀಕಿಸಿ ಪ್ರತಾಪ ಸಿಂಹ, ಅಧಿಕಾರಕ್ಕೆ ಬರಲು ನಿಷೇಧಿತ ಸಂಘಟನೆಯ ಬೆಂಬಲ ಕೇಳುತ್ತಿದ್ದೀರಾ? ಕರ್ನಾಟಕವನ್ನು ಗೂಂಡಾ ರಾಜ್ಯವನ್ನಾಗಿ ಮಾಡಲು ಹೊರಟಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.
