Wednesday, April 15, 2026
Homeದೇಶವಿಪಕ್ಷಗಳ ಒಗ್ಗಟ್ಟು: ಕೇಜ್ರಿವಾಲ್ ಗೆ ಕರೆ ಮಾಡಿದ ಖರ್ಗೆ

ವಿಪಕ್ಷಗಳ ಒಗ್ಗಟ್ಟು: ಕೇಜ್ರಿವಾಲ್ ಗೆ ಕರೆ ಮಾಡಿದ ಖರ್ಗೆ

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಸಿಬಿಐನಿಂದ ಸಮನ್ಸ್ ಬಂದಿರುವ ಒಂದು ದಿನದ ನಂತರ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಕರೆ ಮಾಡಿದ್ದಾರೆ.

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಎಲ್ಲಾ ವಿರೋಧ ಪಕ್ಷಗಳು ಒಗ್ಗೂಡಬೇಕು ಎಂದು ಅವರು ಹೇಳಿದ್ದಾರೆ ಎನ್ನಲಾಗಿದೆ.

ರವಿವಾರ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿ ಕೇಜ್ರಿವಾಲ್ ಸಿಬಿಐ ಮುಂದೆ ಹಾಜರಾಗಲಿದ್ದು, ವಿಚಾರಣೆಯನ್ನು ಎದುರಿಸಲಿದ್ದಾರೆ. ಈ ವಿಚಾರದಲ್ಲಿ ನಾವು ಕೂಡ ನಿಮ್ಮ ಜೊತೆಗೆ ಇದ್ದೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಧೈರ್ಯ ತುಂಬಿದ್ದಾರೆ ಎನ್ನಲಾಗಿದೆ.

ಲೋಕಸಭಾ ಚುನಾವಣೆಗೆ ಇನ್ನು ಒಂದು ವರ್ಷ ಇದೆ ಎನ್ನುವಾಗಲೇ ಕಾಂಗ್ರೆಸ್ ಈಗಾಗಲೇ ವಿರೋಧ ಪಕ್ಷಗಳನ್ನು ಒಗ್ಗೂಡಿಸುವಂತಹ ಕೆಲಸಗಳನ್ನು ಮಾಡ್ತಾ ಇದೆ. ಇದರ ಭಾಗವಾಗಿ ಇತ್ತೀಚೆಗಷ್ಟೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿಹಾರ ಸಿಎಂ ನಿತೀಶ್ ಕುಮಾರ್ ಮತ್ತು ಡಿಸಿಎಂ ತೇಜಸ್ವಿ ಯಾದವ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ಇದರ ಮರುದಿನ ಎನ್ ಸಿಪಿ ನಾಯಕ ಶರದ್ ಪವಾರ್ ಅವರ ಜೊತೆಗೂ ಮಾತುಕತೆ ನಡೆಸಿದ್ದರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಒಂದು ಪಕ್ಷದಿಂದ ಸಾಧ್ಯವಿಲ್ಲ. ಹೀಗಾಗಿ ವಿರೋಧಪಕ್ಷಗಳ ಒಗ್ಗಟು ಅತ್ಯಗತ್ಯ ಎನ್ನುವುದನ್ನು ಕಾಂಗ್ರೆಸ್ ಮನಗಂಡಿದ್ದು ಈ ಪ್ರಯತ್ನಗಳನ್ನು ನಡೆಸುತ್ತಿದೆ.

ಹೆಚ್ಚಿನ ಸುದ್ದಿ