Saturday, June 27, 2026
Homeಚುನಾವಣೆ 2023ಪ್ರಚಾರಕ್ಕೆ ತೆರಳಿದ್ದ ಚಿಂಚೋಳಿ ಶಾಸಕ ಹಾಗೂ ಬೆಂಬಲಿಗರ ಮೇಲೆ ದಾಳಿ

ಪ್ರಚಾರಕ್ಕೆ ತೆರಳಿದ್ದ ಚಿಂಚೋಳಿ ಶಾಸಕ ಹಾಗೂ ಬೆಂಬಲಿಗರ ಮೇಲೆ ದಾಳಿ

ಶಾಸಕ ಡಾ.ಅವಿನಾಶ್ ಜಾಧವ್ ಮತ್ತು ಬೆಂಬಲಿಗರ ಕಾರ್​​ಗಳ ಮೇಲೆ ಕಲ್ಲು ತೂರಾಟ ನಡೆಸಿ ದಾಳಿ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಚಂದನಕೇರಾ ಗ್ರಾಮದಲ್ಲಿ ಘಟನೆ ನಡೆದಿದೆ.

ಚುನಾವಣೆ ಹಿನ್ನೆಲೆಯಲ್ಲಿ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ  ಶಾಸಕ ಡಾ.ಅವಿನಾಶ್ ಜಾಧವ್ ಚುನಾವಣೆ ಪ್ರಚಾರಕ್ಕೆಂದು ಏ.15 ರ  ರಾತ್ರಿ ಚಂದನಕೇರಾ ಗ್ರಾಮಕ್ಕೆ ಹೋಗಿದ್ದರು. ಈ ವೇಳೆ ಗ್ರಾಮದ ಕೆಲ ಕಿಡಿಗೇಡಿಗಳು ಡಾ. ಬಿ. ಆರ್​​ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿಲ್ಲಾ ಎಂದು ನೆಪವೊಡ್ಡಿ ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಬಳಿಕ ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು, ಕಾರುಗಳ ಮೇಲೆ ಕಲ್ಲೆಸೆದು, ಡಾ.ಅವಿನಾಶ್ ಜಾಧವ್ ಮತ್ತು ಬೆಂಬಲಿಗರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದಾರೆ. ಸ್ಥಳಕ್ಕೆ ಕಲಬುರಗಿ ಎಸ್ಪಿ ಇಶಾ ಪಂತ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್ ಕೂಡಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ರಟಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಚ್ಚಿನ ಸುದ್ದಿ