ಕೊಲ್ಕತ್ತಾ: ರಾಜ್ಯದಲ್ಲಿ ತಾಪಮಾನ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಒಂದು ವಾರಗಳ ಕಾಲ ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗುವುದು ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಕಳೆದ ಕೆಲವು ದಿನಗಳಿಂದ ಮಕ್ಕಳು ಶಾಲೆಯಿಂದ ಹಿಂತಿರುಗಿದ ನಂತರ ತಲೆನೋವು ಮುಂತಾದ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹೀಗಾಗಿ ಖಾಸಗಿ ಸಂಸ್ಥೆಗಳೂ ಈ ನಿಯಮ ಪಾಲಿಸಬೇಕು ಎಂದಿದ್ದಾರೆ.
ಇದೇ ಸಂದರ್ಭ ಮಧ್ಯಾಹ್ನ 12 ರಿಂದ ಸಂಜೆ 4 ರವರೆಗೆ ಜನರು ಬಿಸಿಲಿನಲ್ಲಿ ಹೊರ ಹೋಗುವುದನ್ನು ಕಡಿಮೆ ಮಾಡಬೇಕು ಎಂದು ಅವರು ವಿನಂತಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗಷ್ಟೇ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನ ದಾಖಲಾಗಿತ್ತು.