Monday, October 13, 2025
Homeಚುನಾವಣೆ 2023ತಡರಾತ್ರಿವರೆಗೂ ಶೆಟ್ಟರ್ ಮನವೊಲಿಕೆ: ಇಂದು ಕಾಂಗ್ರೆಸ್ ಸೇರ್ಪಡೆ!

ತಡರಾತ್ರಿವರೆಗೂ ಶೆಟ್ಟರ್ ಮನವೊಲಿಕೆ: ಇಂದು ಕಾಂಗ್ರೆಸ್ ಸೇರ್ಪಡೆ!

ಬೆಂಗಳೂರು: ಮಾಜಿ ಡಿಸಿಎಂ ಬೆಳಗಾವಿಯ ಪ್ರಭಾವಿ ಬಿಜೆಪಿ ನಾಯಕ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಬಿಜೆಪಿ ಮತ್ತೋರ್ವ ನಾಯಕ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಲಿದ್ದಾರೆ.

ಬಿಜೆಪಿ ಟಿಕಡಟ್‌ ನಿರಾಕರಿಸಿದ ಕಾರಣ ಬೇಸರಗೊಂಡಿರುವ ಜಗದೀಶ್‌ ಶೆಟ್ಟರ್ ಬಿಜೆಪಿಗೆ ರಾಜಿನಾಮೆ ನೀಡಿದ್ರು. ಭಾನುವಾರ ತಡರಾತ್ರಿವರೆಗೂ ಕಾಂಗ್ರೆಸ್ ನಾಯಕರೊಂದಿಗೆ ಮಹತ್ವದ ಚರ್ಚೆ ನಡೆಸಿದ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯ ತೀರ್ಮಾನ ಮಾಡಿದ್ದಾರೆ

ಬೆಂಗಳೂರಿನ ಶೆಟ್ಟರ್ ಬೀಗರಾದ ಶ್ಯಾಮನೂರು ಶಿವಶಂಕರಪ್ಪ ಮನೆಯಲ್ಲಿ ವಾಸವಾಗಿದ್ದ ಶೆಟ್ಟರ್ ಭೇಟಿಗೆ ರಾಜ್ಯ ಕಾಂಗ್ರೆಸ್‌ ದಂಡೇ ಬಂದಿತ್ತು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ, ಸಿಎಲ್‌ಪಿ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಉಪಸ್ಥಿತಿಯಲ್ಲಿ ನಿನ್ನೆ ರಾತ್ರಿ ಇಡೀ ಶೆಟ್ಟರ್ ಕಾಂಗ್ರೆಸ್‌ ಸೇರ್ಪಡೆ ಕುರಿತಂತೆ ಸುದೀರ್ಘ ಐದು ಗಂಟೆಗಳ ಕಾಲ ರಹಸ್ಯ ಚರ್ಚೆ ನಡೆಯಿತು. ಲಕ್ಷ್ಮಣ ಸವದಿ ನಂತರ ಶೆಟ್ಟರ್‌ ಕಾಂಗ್ರೆಸ್‌ ಸೇರ್ಪಡೆಯಾಗಿರುವುದು ಕಾಂಗ್ರೆಸ್​ ಪಕ್ಷಕ್ಕೆ ಬಲ ತಂದಿದ್ದು, ಈ ಬಾರಿಯ ಚುನಾವಣೆಯಲ್ಲಿ ಶೆಟ್ಟರ್, ಸವದಿ ಮುಂದೆ ಬಿಟ್ಟು ಲಿಂಗಾಯತ ಸಮುದಾಯದ ಮತಗಳ ಸೆಳೆಯಲು ತಂತ್ರಗಾರಿಕೆ ಹೆಣೆದಿದೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು ಶೆಟ್ಟರ್ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಇತರೆ ಕಾಂಗ್ರೆಸ್ ನಾಯಕರು ಶೆಟ್ಟರ್‌ರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಿದ್ದಾರೆ.

ಹೆಚ್ಚಿನ ಸುದ್ದಿ