ಬೆಂಗಳೂರು: ಬಿಜೆಪಿಯಲ್ಲಿ ಸ್ವಾಭಿಮಾನಕ್ಕೆ ಧಕ್ಕೆಯಾದವರೆಲ್ಲರೂ ಕಾಂಗ್ರೆಸ್ ಗೆ ಬರುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳೀದ್ದಾರೆ.
ಜಗದೀಶ್ ಶೆಟ್ಟರ್ ಕಾಂಗ್ರೆಸ್‌ಗೆ ಸೇರ್ಪಡೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆತ್ಮಗೌರವ ಹಾಗೂ ಸ್ವಾಭಿಮಾನಕ್ಕಾಗಿ ಅನೇಕರು ಕಾಂಗ್ರೆಸ್ ಪಕ್ಷವನ್ನು ಸೇರುತ್ತಿದ್ದಾರೆ. ಈ ರಾಜ್ಯದಲ್ಲಿ ಬದಲಾವಣೆ ತರಲು ಬರುತ್ತಿದ್ದಾರೆ. ಅನೇಕರು ಬರುತ್ತಿದ್ದಾರೆ ಎಂದು ಹೇಳಿದರು.
ಜಗದೀಶ್ ಶೆಟ್ಟರ್ ಅವರು ಪಕ್ಷಕ್ಕೆ ಸೇರ್ಪಡೆಯಾಗಲು ಯಾವುದೇ ಕಂಡಿಷನ್ ಅನ್ನು ಹಾಕಿಲ್ಲ. ಬಿಜೆಪಿ ಲಿಂಗಾಯತರನ್ನು ಕಡೆಗಣಿಸುತ್ತಿದೆ. ಇಡೀ ಲಿಂಗಾಯತ ಸಮುದಾಯವೇ ಕಾಂಗ್ರೆಸ್ ಸೇರ್ಪಡೆಯಾಗುತ್ತದೆ. ಈ ಬಾರಿಯ ಚುನಾವಣೆಯಲ್ಲಿ 150 ಸ್ಥಾನಗಳನ್ನ ಕಾಂಗ್ರೆಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
