Monday, October 13, 2025
Homeಚುನಾವಣೆ 2023ಬೆಳ್ತಂಗಡಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಚಕಮಕಿ-ಕಾರಿಗೆ ಹಾನಿ

ಬೆಳ್ತಂಗಡಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಚಕಮಕಿ-ಕಾರಿಗೆ ಹಾನಿ

ಬೆಳ್ತಂಗಡಿ ಸಂತೆಕಟ್ಟೆ ಬಳಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕಾರಿನ ಗಾಜು ಹುಡಿ ಮಾಡಿದ ಘಟನೆ ಇಂದು ನಡೆದಿದೆ.
ಬೆಳ್ತಂಗಡಿಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ನಾಮಪತ್ರ ಸಲ್ಲಿಸಿ ತೆರಳುತ್ತಿದ್ದಂತೆ ಅತ್ತ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ನಾಮಪತ್ರ ಸಲ್ಲಿಸಲು ಆಗಮಿಸುತ್ತಿದ್ದರು. ‌ ಉಭಯ ತಂಡದಲ್ಲಿಯೂ ಸಾವಿರಾರು ಕಾರ್ಯಕರ್ತರು ಇದ್ದರು. ಈ ವೇಳೆ ಜೈ ಬಿಜೆಪಿ, ಜೈ ಕಾಂಗ್ರೆಸ್ ಘೋಷಣೆ ಮೊಳಗಿದ್ದು ಪರಸ್ಪರ ಮಾತಿನ‌ ಚಕಮಕಿ ನಡೆದಿದೆ.

ಉದ್ರಿಕ್ತ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ‌ ಕಾರ್ಯಕರ್ತರಿಗೆ ಸೇರಿದ ಕಾರಿನ ಗಾಜು ಪುಡಿ ಮಾಡಿದ್ದಾರೆ ಎಂದು ದೂರಲಾಗಿದೆ. ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್ ಏರ್ಪಡಿಸಿದ್ದು ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ. ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಚ್ಚಿನ ಸುದ್ದಿ