ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದ ಕಾಂಗ್ರೆಸ್ ನ ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಇಂದು ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆಯಾದೂ ಪುಲಿಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸಮೂರ್ತಿಗೆ ಟಿಕೆಟ್ ಖಚಿತಗೊಂಡಿರಲಿಲ್ಲ. ಇದರಿಂದ ಅಸಮಾಧಾನಗೊಂಡಿರುವ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇಂದು ಕುಟುಂಬಸ್ಥರ ಹಾಗೂ ಅಪಾರ ಬೆಮಬಲಿಗರೊಂದಿಗೆ ಆಗಮಿಸಿ ಸ್ವತಂತ್ರವಾಗಿ ಕಣಕ್ಕಿಳಿದಿದ್ದಾರೆ.
ರಾಜ್ಯದಲ್ಲಿ ಅತಿ ಹೆಚ್ಚು ಮತ ಪಡೆದು ವಿಧಾನಸಭೆ ಪ್ರವೇಶಿಸಿದ್ದ ಇವರು ಟಿಕೆಟ್ ಘೋಷಣೆಯಾಗದ ಕಾರಣ ಪಕ್ಷದ ವಿರುದ್ಧ ಬಂಡಾಯ ಎದ್ದಿದ್ದರು.