Tuesday, July 8, 2025
HomeUncategorizedಸಾಲುಸಾಲು ಬಿಜೆಪಿ ನಾಯಕರ ನಾಮಪತ್ರ ಸಲ್ಲಿಕೆ

ಸಾಲುಸಾಲು ಬಿಜೆಪಿ ನಾಯಕರ ನಾಮಪತ್ರ ಸಲ್ಲಿಕೆ

ಬೆಂಗಳೂರು: ನಾಮಪತ್ರ ಸಲ್ಲಿಕೆಗೆ ಇನ್ನು ಕೆಲವೇ ದಿನಗಳು ಉಳಿದಿರುವ ಹಿನ್ನೆಲೆಯಲ್ಲಿ ಮಂಗಳವಾರ ಹಲವರು ತಮ್ಮ ಉಮೇದುವಾರಿಕೆಯನ್ನು ಖಚಿತಪಡಿಸಿ ನಾಮಪತ್ರ ಸಲ್ಲಿಸಿದ್ದಾರೆ.
ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಬಿ.ಎ.ಬಸವರಾಜ್ (ಬೈರತಿ) ಇಂದು ನಾಮಪತ್ರ ಸಲ್ಲಿಸಿದ್ದಾರೆ. ಮಾಜಿ ಸಚಿವ ಹಾಗೂ ಶಾಸಕ ಎಸ್.ಸುರೇಶ್ ಕುಮಾರ್ ರಾಜಾಜಿನಗರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಜಯನಗರದಿಂದ ರಾಮಮೂರ್ತಿ ಸಿ.ಕೆ. ಬಿಜೆಪಿ ಅಭ್ಯರ್ಥಿಯಾಗಿದ್ದು, ಅವರೂ ಸಹ ಇಂದು ನಾಮಪತ್ರ ಸಲ್ಲಿಸಿದರು.

ಹೆಚ್ಚಿನ ಸುದ್ದಿ