ಬಾಗಲಕೋಟೆ: ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಮಂಗಳವಾರ ಬೀಳಗಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಪಟ್ಟಣದ ಪ್ರಮುಖ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದ ಬಳಿಕ ನಾಮಪತ್ರ ಸಲ್ಲಿಸಿದ ನಿರಾಣಿ ಅವರಿಗೆ, ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಗೋವಿಂದ ಕಾರಜೋಳ ಜೊತೆ ನೀಡಿದರು.
ರಸ್ತೆಯಲ್ಲಿ ಸಾವಿರಾರು ಮಂದಿಯ ಭರ್ಜರಿ ಮೆರವಣಿಗೆಯಲ್ಲಿ ಅಭಿಮಾನಿಗಳ ಜಯಘೋಷದೊಂದಿಗೆ ನಿರಾಣಿ ಚುನಾವಣಾಧಿಕಾರಿಗಳ ಕೇಂದ್ರಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಿದರು.