Friday, April 17, 2026
Homeಟಾಪ್ ನ್ಯೂಸ್ಅಪಾಯಕ್ಕೆ ಸಿಲುಕಿಸಬೇಡಿ: ಸಿದ್ದರಾಮಯ್ಯ ಸುಡಾನ್ ಟ್ವೀಟ್ ಗೆ ಜೈಶಂಕರ್ ಪ್ರತಿಕ್ರಿಯೆ

ಅಪಾಯಕ್ಕೆ ಸಿಲುಕಿಸಬೇಡಿ: ಸಿದ್ದರಾಮಯ್ಯ ಸುಡಾನ್ ಟ್ವೀಟ್ ಗೆ ಜೈಶಂಕರ್ ಪ್ರತಿಕ್ರಿಯೆ

ಹೊಸದಿಲ್ಲಿ: ಆಂತರಿಕ ಯುದ್ಧ ಪೀಡಿತ ಸುಡಾನ್‌ನಲ್ಲಿ ಸಿಲುಕಿರುವ ಕರ್ನಾಟಕದ 31 ಬುಡಕಟ್ಟು ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ನೀಡಿದ ಹೇಳಿಕೆಗಾಗಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, ಬುಡಕಟ್ಟು ಸಮುದಾಯಕ್ಕೆ ಸೇರಿದ ಜನರನ್ನು ಮರಳಿ ಕರೆತರುವಲ್ಲಿ ಸರ್ಕಾರದ ವಿಫಲಗೊಂಡಿದೆ ಎಂದು ಆರೋಪಿಸಿದ್ದರು.

“ಸುಡಾನ್‌ನಲ್ಲಿರುವ ಹಕ್ಕಿ ಪಿಕ್ಕಿ ಜನಾಂಗದವರು ಕಳೆದ ಕೆಲವು ದಿನಗಳಿಂದ ಆಹಾರವಿಲ್ಲದೆ ಸಿಲುಕಿಕೊಂಡಿದ್ದಾರೆ ಮತ್ತು ಅವರನ್ನು ಮರಳಿ ಕರೆತರಲು ಸರ್ಕಾರ ಇನ್ನೂ ಕ್ರಮ ಕೈಗೊಂಡಿಲ್ಲ” ಎಂದು ಅವರು ಪ್ರತಿಪಾದಿಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಜೈಶಂಕರ್ “ಈ ಪರಿಸ್ಥಿತಿಯನ್ನು ರಾಜಕೀಯಗೊಳಿಸುವುದು ಅತ್ಯಂತ ಬೇಜವಾಬ್ದಾರಿಯಾಗಿದೆ. ಯಾವುದೇ ಚುನಾವಣಾ ನಿಯಮಗಳು ವಿದೇಶದಲ್ಲಿರುವ ಭಾರತೀಯರನ್ನು ಅಪಾಯಕ್ಕೆ ಸಿಲುಕಿಸುವುದನ್ನು ಸಮರ್ಥಿಸುವುದಿಲ್ಲ” ಎಂದಿದ್ದಾರೆ.

ಹೆಚ್ಚಿನ ಸುದ್ದಿ