Wednesday, April 15, 2026
Homeಟಾಪ್ ನ್ಯೂಸ್ಧಾರವಾಡ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಹತ್ಯೆ

ಧಾರವಾಡ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಹತ್ಯೆ

ಧಾರವಾಡ: ಬಿಜೆಪಿ ಧಾರವಾಡ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರವೀಣ ಕಮ್ಮಾರ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ಪ್ರವೀಣ ಕಮ್ಮಾರ ಹೊಟ್ಟೆಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರವೀಣ ಅವರನ್ನು ಧಾರವಾಡದ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಸಂಬಂಧ ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಹೆಚ್ಚಿನ ಸುದ್ದಿ