Monday, March 2, 2026
Homeಚುನಾವಣೆ 2023ಹುಬ್ಬಳ್ಳಿಗೆ ಜೆಪಿ ನಡ್ಡಾ ಎಂಟ್ರಿ: ಡ್ಯಾಮೇಜ್‌ ಕಂಟ್ರೋಲ್‌ಗೆ ಪ್ರಯತ್ನ

ಹುಬ್ಬಳ್ಳಿಗೆ ಜೆಪಿ ನಡ್ಡಾ ಎಂಟ್ರಿ: ಡ್ಯಾಮೇಜ್‌ ಕಂಟ್ರೋಲ್‌ಗೆ ಪ್ರಯತ್ನ

ಹುಬ್ಬಳ್ಳಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಎರಡು ದಿನ ಹುಬ್ಬಳ್ಳಿ ಪ್ರವಾಸದಲ್ಲಿದ್ದು, ಇಂದು ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿ ಶ್ರೀ ಸಿದ್ಧಾರೂಢ ಸ್ವಾಮೀಜಿ ಅವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಜೆಪಿ ನಡ್ಡಾ ಅವರಿಗೆ ಶಾಸಕ ಅರವಿಂದ್ ಬೆಲ್ಲದ ಸೇರಿದಂತೆ ಸ್ಥಳೀಯ ನಾಯಕರು ಸಾಥ್ ನೀಡಿದ್ದಾರೆ.

ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ವೇಳೆ ಜೆಪಿ ನಡ್ಡಾ ಕೂಡಾ ಸಾಥ್‌ ನೀಡಲಿದ್ದಾರೆ.

ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಅಲೆ ಜೋರಾಗಿದ್ದು, ಈ ಹಿನ್ನೆಲೆಯಲ್ಲಿ ಜೆಪಿ ನಡ್ಡಾ ರಾಜ್ಯ ಭೇಟಿಯು ಕುತೂಹಲಕ್ಕೆ ಕಾರಣವಾಗಿದೆ. ಅದರಲ್ಲೂ ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್‌ ಸೇರಿರುವ ಡ್ಯಾಮೇಜನ್ನು ಕಂಟ್ರೋಲ್‌ ಮಾಡಲು ಜೆಪಿ ನಡ್ಡಾ ಖುದ್ದು ಆಗಮಿಸಿದ್ದಾರೆ ಎನ್ನಲಾಗಿದೆ.

ಹೆಚ್ಚಿನ ಸುದ್ದಿ