ಹಾವೇರಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ನಾಮಪತ್ರ ಸಲ್ಲಿಸಿದ್ರು. ನಾಮಪತ್ರ ಸಲ್ಲಿಸುವ ವೇಳೆ ಮಾಮ ಬಸವರಾಜ್ ಬೊಮ್ಮಾಯಿಗೆ ಕಿಚ್ಚ ಸುದೀಪ್ ಸಾಥ್ ನೀಡಿದ್ರು.
ಶಿಗ್ಗಾಂವಿ ಕ್ಷೇತ್ರದಿಂದ ಕಣಕ್ಕಿಳಿದಿರುವ ಬಸವರಾಜ್ ಬೊಮ್ಮಾಯಿ ಇಂದು ಬೃಹತ್ ರೋಡ್ ಶೋ ನಡೆಸಿ ಶಕ್ತಿಪ್ರದರ್ಶನ ಮಾಡಿದ್ರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ನಟ ಕಿಚ್ಚ ಸುದೀಪ್, ಗೋವಿಂದ್ ಕಾರಜೋಳ ಬೊಮ್ಮಾಯಿಯವರ ಜೊತೆಗಿದ್ರು