ಮೈಸೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವರುಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಗಿ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಸಲ್ಲಿಸಿರುವ ಆಸ್ತಿ ವಿವರದಲ್ಲಿ ತನಗಿಂತ ತನ್ನ ಪತ್ನಿಯೇ ಹೆಚ್ಚು ಶ್ರೀಮಂತೆ ಅನ್ನುವ ಮಾಹಿತಿಯನ್ನು ಸಿದ್ದರಾಮಯ್ಯ ಅವರು ಒದಗಿಸಿದ್ದಾರೆ.
2018ರಲ್ಲಿ 18.55 ಕೋಟಿ ಮೌಲ್ಯದ ಆಸ್ತಿ ಘೋಷಿಸಿದ್ದ ಸಿದ್ದರಾಮಯ್ಯ, 2023ರಲ್ಲಿ ತಮ್ಮ ಆಸ್ತಿ 19 ಕೋಟಿ ಆಗಿದೆ ಎಂದು ಘೋಷಿಸಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಬಳಿ 32.12 ಕೋಟಿ ರೂ. ಮೌಲ್ಯದ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದಾರೆ.
ಸಿದ್ದರಾಮಯ್ಯ ಅವರಲ್ಲಿ 9.58 ಕೋಟಿ ರೂ. ಮೌಲ್ಯದ ಚರಾಸ್ತಿ ಇದ್ದರೆ, 9.43 ಕೋಟಿ ರೂ. ಬೆಳೆಬಾಳುವ ಸ್ಥಿರಾಸ್ತಿ ಇದೆ. ಪತ್ನಿ ಪಾರ್ವತಿ ಅವರ ಹೆಸರಲ್ಲಿ, 11.26 ಕೋಟಿ ರೂ. ಚರಾಸ್ತಿ ಹಾಗೂ 19.56 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಇದೆ. 6.84 ಕೋಟಿ ರೂ. ಗಳ ಸಾಲ ಇದೆ ಎಂದು ಅವರು ಅಫಿದವಿಟ್‌ನಲ್ಲಿ ತಿಳಿಸಿದ್ದಾರೆ.
