ಕಾಶ್ಮೀರ: ಕಥುವಾ ಜಿಲ್ಲೆಯ ತನ್ನ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳಿಲ್ಲ ಎಂದು 3ನೆ ತರಗತಿಯ ಬಾಲಕಿಯೊಬ್ಬಳು ಪ್ರಧಾನಿಯನ್ನುದ್ದೇಶಿಸಿ ವಿಡಿಯೋ ಮಾಡಿದ ಬೆನ್ನಲ್ಲೇ ಆ ಶಾಲೆಯ ಅಭಿವೃದ್ಧಿ ಕೆಲಸಗಳು ಆರಂಭವಾಗಲಿದೆ.
ಜಮ್ಮು ಮತ್ತು ಕಾಶ್ಮೀರ ಆಡಳಿತವು ದುರಸ್ತಿ ಕಾರ್ಯ ಆರಂಭಿಸಿದೆ.
‘ಶಾಲೆಯನ್ನು ಆಧುನಿಕ ರೀತಿಯಲ್ಲಿ ಮೇಲ್ದರ್ಜೆಗೇರಿಸಲು ₹ 91 ಲಕ್ಷ ಮೊತ್ತದ ಯೋಜನೆ ಮಂಜೂರಾಗಿದ್ದು, ಆಡಳಿತಾತ್ಮಕ ಮಂಜೂರಾತಿಗೆ ಸಂಬಂಧಿಸಿದ ಕೆಲ ಸಮಸ್ಯೆಯಿಂದ ಕಾಮಗಾರಿ ಬಾಕಿಯಾಗಿತ್ತು. ಈಗ ಅದನ್ನು ಇತ್ಯರ್ಥ ಪಡಿಸಲಾಗಿದ್ದು, ಕಾಮಗಾರಿ ನಡೆಯುತ್ತಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
