ಬೆಂಗಳೂರು : ಸಿರಿವಂತ ರಾಜಕಾರಣಿ ಕೆಜಿಎಫ್ ಬಾಬು ಕಾಂಗ್ರೆಸ್ ಪಕ್ಷಕ್ಕೆ ವಿದಾಯ ಹೇಳಿದ್ದಾರೆ. ಗುರುವಾರ ತಮ್ಮ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕೆಜಿಎಫ್ ಬಾಬು, ಪಕ್ಷದ ಇತ್ತೀಚಿನ ವಿದ್ಯಾಮಾನಗಳಿಂದ ಬೇಸತ್ತು ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಹೇಳಿದ್ದಾರೆ.
ಯೂಸುಫ್ ಶರೀಫ್ ಅಲಿಯಾಸ್ ಕೆಜಿಎಫ್ ಚಿಕ್ಕಪೇಟೆ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದರು. ಆದರೆ ಕಾಂಗ್ರೆಸ್ ಆರ್.ವಿ.ದೇವರಾಜ್ ಅವರಿಗೆ ಟಿಕೆಟ್ ನೀಡಿತ್ತು. ಕೆಜಿಎಫ್ ಬಾಬು ತಮ್ಮ ಪತ್ನಿಯನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದಾರೆ.
ನಿನ್ನೆಯಷ್ಟೇ ಕೆಜಿಎಫ್ ಬಾಬು ಮನೆ ಮತ್ತು ಕಚೇರಿಯ ಮೇಲೆ ಐಟಿ ದಾಳಿ ನಡೆಸಿರುವುದು ಉಲ್ಲೇಖನೀಯ.