ಬೆಂಗಳೂರು: ಕರ್ನಾಟಕ ಚುನಾವಣೆ ಹಿನ್ನೆಲೆ ಬಿಜೆಪಿ ವರಿಷ್ಠರು ಪದೇ ಪದೇ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಾಜ್ಯಕ್ಕೆ ಭೇಟಿ ಕೊಡಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಾ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ನಡ್ಡಾ ಅವರು ನಾಳೆ ಬೆಳಿಗ್ಗೆ 11.30ಕ್ಕೆ ಬೀದರ್ ವಿಮಾನನಿಲ್ದಾಣಕ್ಕೆ ಆಗಮಿಸಲಿದ್ದು, ಬಳಿಕ 11.45ಕ್ಕೆ ಶ್ರೀ ರಾಮಕೃಷ್ಣ ಆಶ್ರಮಕ್ಕೆ ತಲುಪಲಿದ್ದಾರೆ. ಅಲ್ಲಿ ಸ್ವಾಮೀಜಿಗಳ ಆಶೀರ್ವಾದ ಪಡೆದು ಗೋಪೂಜೆ ನೆರವೇರಿಸಲಿದ್ದಾರೆ.
ಮಧ್ಯಾಹ್ನ 1.05 ಗಂಟೆಯಿಂದ ಹೋಟೆಲ್ ವೈಬ್‍ನಲ್ಲಿ ಮತದಾರರು ಮತ್ತು ಪ್ರಮುಖರ ಜೊತೆ ಸಭೆಯಲ್ಲಿ ಭಾಗವಹಿಸಿ, ಸಂಜೆ ವೇಳೆಗೆ ಜನಪ್ರತಿನಿಧಿಗಳ ಜೊತೆ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ 4.50 ರಿಂದ ಪಕ್ಷದ ಪ್ರಮುಖರ ಜೊತೆ ಸಮಾಲೋಚನೆ ನಡೆಸಿ, 6 ಗಂಟೆಯಿಂದ ರೋಡ್ ಷೋ, ರಾತ್ರಿ 8.45ರಿಂದ ಮತ್ತೊಂದು ಸಭೆಯಲ್ಲಿ ಭಾಗವಹಿಸಿ ರಾತ್ರಿಯೇ ದಿಲ್ಲಿಗೆ ಮರಳಲಿದ್ದಾರೆ.
ಅಮಿತ್ ಶಾ ನಾಳೆ ಮಧ್ಯಾಹ್ನ 3.20 ಗಂಟೆಗೆ ಕೆಂಪೇಗೌಡ ವಿಮಾನನಿಲ್ದಾಣಕ್ಕೆ ಆಗಮಿಸಲಿದ್ದು, 3.45ರಿಂದ ಸಂಜೆ 5.15ರವರೆಗೆ ದೇವನಹಳ್ಳಿ ಕ್ಷೇತ್ರಕ್ಕೆ ಸಂಬಂಧಿಸಿದ ರೋಡ್ ಷೋದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 6.10ರಿಂದ ಪಕ್ಷದ ಸಭೆಯಲ್ಲಿ ಪಾಲ್ಗೊಂಡು, ಮರುದಿನ ಬೆಳಿಗ್ಗೆ 10.30ಕ್ಕೆ ನಗರದ ರಿಡ್ಜ್ ಕಾರ್ಲ್‍ಟನ್ ಹೋಟೆಲ್‍ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಧ್ಯಾಹ್ನ ಅವರು ದೆಹಲಿಗೆ ಹಿಂತಿರುಗಲಿದ್ದಾರೆ.