Friday, April 17, 2026
HomeUncategorizedಮಲೇರಿಯಾ ವಿರೋಧಿ ಮಾಸಾಚರಣೆ: ಮಲೇರಿಯಾ ನಿಯಂತ್ರಣಕ್ಕೆ ನೆರವಾಗಿ ಸಮುದಾಯ ಆರೋಗ್ಯ ಅಧಿಕಾರಿ ಪಡಿಯಪ್ಪ ಕರೆ

ಮಲೇರಿಯಾ ವಿರೋಧಿ ಮಾಸಾಚರಣೆ: ಮಲೇರಿಯಾ ನಿಯಂತ್ರಣಕ್ಕೆ ನೆರವಾಗಿ ಸಮುದಾಯ ಆರೋಗ್ಯ ಅಧಿಕಾರಿ ಪಡಿಯಪ್ಪ ಕರೆ

ಗಜೇಂದ್ರಗಡ (ಕೊಡಗಾನೂರು): ‘ಮಲೇರಿಯಾ, ಸೊಳ್ಳೆಯಿಂದ ಮನುಷ್ಯನಿಗೆ ಹರಡುವ ರೋಗ. ಅನಾಫಿಲಿಸ್ ಸೊಳ್ಳೆ ಕಚ್ಚಿದಾಗ ಜ್ವರ ಬರುತ್ತದೆ. ಮನೆ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಿ’ ಎಂದು ಸಮುದಾಯ ಆರೋಗ್ಯ ಅಧಿಕಾರಿ ಪಡಿಯಪ್ಪ ಹೇಳಿದರು.ಗಜೇಂದ್ರಗಡ ಸಮುದಾಯ ಅರೋಗ್ಯ ಕೇಂದ್ರದ ವತಿಯಿಂದ ಸಮೀಪದ ಕೊಡಗಾನೂರು ಗ್ರಾಮದಲ್ಲಿ ನಡೆದ ಮಲೇರಿಯಾ ವಿರೋಧಿ ಮಾಸಾಚರಣೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ಒಂದು ಸಲ ಈ ಅನಾಫಿಲಿಸ್ ಸೊಳ್ಳೆಯು ಮನುಷ್ಯರಿಗೆ ಕಚ್ಚಿದ ಬಳಿಕ ಪ್ಲಾಸ್ಮೋಡಿಯಾ ಮನುಷ್ಯನ ಯಕೃತ್‍ನಲ್ಲಿ ತನ್ನ ಸಂತಾನಾಭಿವೃದ್ಧಿ ಮಾಡಿ, ಸೋಂಕು ಉಂಟು ಮಾಡುತ್ತದೆ. ಕೆಂಪು ರಕ್ತದ ಕಣಗಳನ್ನು ನಾಶಪಡಿಸುತ್ತದೆ. ಸಾಮಾನ್ಯವಾಗಿ ಮಲೇರಿಯಾ ಜ್ವರವನ್ನು ಹೊಂದಿದ ವ್ಯಕ್ತಿಗಳು ತೀವ್ರ ಅನಾರೋಗ್ಯದಿಂದ ಬಳಲುತ್ತಿರುತ್ತಾರೆ. ವಿಪರೀತ ಜ್ವರ, ಹಲ್ಲು ಕಚ್ಚಿಕೊಳ್ಳುವಷ್ಟು ಚಳಿ, ಜತೆಗೆ ಮೈಕೈ ನೋವು ಸಾಮಾನ್ಯ ಸಮಸ್ಯೆಗಳಾಗಿ ಕಾಡುತ್ತವೆ. ಮೊದಲೇ ಇವುಗಳ ಬಗ್ಗೆ ಅರಿತು ಚಿಕಿತ್ಸೆ ಪಡೆದರೆ ಸಾವು ಸಂಭವಿಸುವುದನ್ನು ತಪ್ಪಿಸಬಹುದು ಎಂದು ಅವರು ಹೇಳಿದರು.

ವರದಿ: ಯಮನೂರಪ್ಪ ಆರ್ ಅಬ್ಬಿಗೇರಿ

ಹೆಚ್ಚಿನ ಸುದ್ದಿ