Monday, March 2, 2026
Homeವಿದೇಶದೇವಸ್ಥಾನದ ಮರದ ಕೆಳಗೆ ನಗ್ನ ಫೋಟೋಶೂಟ್: ಮಹಿಳೆ ಗಡಿಪಾರು

ದೇವಸ್ಥಾನದ ಮರದ ಕೆಳಗೆ ನಗ್ನ ಫೋಟೋಶೂಟ್: ಮಹಿಳೆ ಗಡಿಪಾರು

ಜಕಾರ್ತ: ಪ್ರವಾಸಕ್ಕೆ ಬಂದಿದ್ದ ರಷ್ಯಾದ ಇನ್ಸ್ಟಾಗ್ರಾಮ್ ತಾರೆಯೊಬ್ಬಳು, ದೇವಸ್ಥಾನದ ಮರದ ಕೆಳಗೆ ನಗ್ನ ಫೋಟೋಶೂಟ್ ಮಾಡಿಸಿದ್ದಕ್ಕಾಗಿ ಇಂಡೋನೇಷ್ಯಾದ ಬಾಲಿಯಿಂದ ಗಡಿಪಾರಾಗಿದ್ದಾಳೆ.

ಮಹಿಳೆ ನಗ್ನ ಫೋಟೋಶೂಟ್ ಮಾಡಿಸಿರುವುದು, ಬಾಲಿಯ ಹಿಂದೂ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಹೇಳಿ, ತೀವ್ರ ಪ್ರತಿಭಟನೆಯ ನಂತರ ಇಂಡೋನೇಷ್ಯಾ ಸರ್ಕಾರ ಮಹಿಳೆಯನ್ನು ಗಡಿಪಾರು ಮಾಡಿದೆ. ರಷ್ಯಾದ 40ರ ಹರೆಯದ ಮಹಿಳೆ ಲೂಯ್ಜಾ ಕೊಶ್ಯಾಕ್ ಬಾಲಿ ಪ್ರವಾಸ ಕೈಗೊಂಡಿದ್ದರು.

ಬಾಲಿಯ ಸುಂದರ ತಾಣಗಳಲ್ಲಿ ಕೆಲ ದಿನಗಳ ಕಾಲ ಕಳೆದ ಕೋಶ್ಯಾಕ್, ಬಾಲಿಯ ತಬನನ್ ದೇವಸ್ಥಾನ ವೀಕ್ಷಣೆಗೆ ಆಗಮಿಸಿದ್ದಳು. ಈ ವೇಳೆ ಭಾರೀ ಗಾತ್ರದ ಮರ ಈಕೆಯ ಕಣ್ಣಿಗೆ ಬಿದ್ದಿದೆ. ಇದೇ ಮರದ ಬಳಿ ನಗ್ನವಾಗಿ ನಿಂತು ಫೋಟೋಶೂಟ್ ಮಾಡಿಸಿಕೊಂಡಿದ್ದಾಳೆ. ಹಲವು ಫೋಟೋಗಳನ್ನು ತೆಗೆಸಿರುವ ಕೋಶ್ಯಾಕ್ ಅದನ್ನು ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾಳೆ.

ಮಹಿಳೆಯ ಫೋಟೋಶೂಟ್ ಖಂಡಿಸಿ ಬಾಲಿಯ ಹಿಂದೂ ಸಮುದಾಯ ತೀವ್ರ ಪ್ರತಿಭಟನೆ ನಡೆಸಿದ ಬಳಿಕ ಕಾರ್ಯಪ್ರವೃತ್ತರಾದ ಇಂಡೋನೇಷ್ಯಾ ಅಧಿಕಾರಿಗಳು, ಲೂಯ್ಜಾ ಕೋಶ್ಯಾಕ್ ಬಂಧಿಸಿದ್ದಾರೆ. ಇಷ್ಟೇ ಅಲ್ಲ ಮತ್ತೆ ಇಂಡೋನೇಷ್ಯಾ ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದೆ. ತಬನನ್ ದೇವಸ್ಥಾನದ ಆವರಣದಲ್ಲಿರುವ ಈ ಪವಿತ್ರ ಮರ ಸುಮಾರು 700 ವರ್ಷಗಳಷ್ಟು ಹಳೆಯ ಮರವಾಗಿದೆ. ಕಳೆದ ವರ್ಷ ರಷ್ಯಾದ ಯೋಗಪಟು ಇದೇ ಮರದ ಬುಡದಲ್ಲಿ ಫೋಟೋ ತೆಗೆದು ವಿವಾದ ಸೃಷ್ಟಿಸಿದ್ದರು.

ಹೆಚ್ಚಿನ ಸುದ್ದಿ