ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಇಂದು ಸಿಬಿಐ ಅರವಿಂದ್ ಕೇಜ್ರಿವಾಲ್ ಅವರ ವಿಚಾರಣೆ ನಡೆಸುವ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿ ಆಮ್ ಆದ್ಮಿ ಪಕ್ಷದ ನಾಯಕರ ತುರ್ತು ಸಭೆ ಕರೆದಿದೆ.
ನವದೆಹಲಿಯ ಕಪುರ್ತಲಾ ಹೌಸ್‌ನಲ್ಲಿ ನಡೆದ ಸಭೆಯಲ್ಲಿ ಪಂಜಾಬ್ ಸಿಎಂ ಭಗವಂತ್ ಮಾನ್, ಗೋಪಾಲ್ ರೈ, ಪಂಕಜ್ ಗುಪ್ತಾ ಹಾಗೂ ಪಕ್ಷದ ಹಲವು ಹಿರಿಯ ನಾಯಕರು ಭಾಗವಹಿಸಿದ್ದರು.
ಕೇಜ್ರಿವಾಲ್ ಗೆ ಸಿಬಿಐ ಸಮನ್ಸ್ ನೀಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಆಮ್ ಆದ್ಮಿಯ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಪ್ ನಾಯಕರಾದ ಸಂಜಯ್ ಸಿಂಗ್, ರಾಘವ್ ಚಡ್ಡಾ, ಸೌರಭ್ ಭಾರದ್ವಾಜ್, ಅತಿಶಿ, ಕೈಲಾಶ್ ಗಹ್ಲೋಟ್, ಆದಿಲ್ ಅಹ್ಮದ್ ಖಾನ್ ಮುಂತಾದ ನಾಯಕರನ್ನು ವಶಕ್ಕೆ ಪಡೆಯಲಾಗಿದೆ.
ಪೊಲೀಸರ ಈ ಕ್ರಮವನ್ನು ವಿರೋಧಿಸಿರುವ ರಾಘವ್ ಚಡ್ಡಾ, ’’ಶಾಂತಿಯುತವಾಗಿ ಕುಳಿತಿದ್ದಕ್ಕೆ ದೆಹಲಿ ಪೊಲೀಸರು ನಮ್ಮನ್ನು ಬಂಧಿಸಿದ್ದಾರೆ ಮತ್ತು ಯಾವುದೋ ಅಜ್ಞಾತ ಸ್ಥಳಕ್ಕೆ ಕರೆದೊಯ್ಯುತ್ತಿದ್ದಾರೆ … ಇದು ಯಾವ ರೀತಿಯ ಸರ್ವಾಧಿಕಾರ?” ಎಂದು ಪ್ರಶ್ನಿಸಿದ್ದಾರೆ.
