Saturday, April 25, 2026
Homeದೇಶ2024ರ ಚುನಾವಣೆಯಲ್ಲಿ ಬಿಜೆಪಿಗೆ ಉಲ್ಟಾ ಹೊಡೆಯಲಿದೆ ಅದಾನಿ ಹಗರಣ: ಸತ್ಯಪಾಲ್ ಮಲಿಕ್

2024ರ ಚುನಾವಣೆಯಲ್ಲಿ ಬಿಜೆಪಿಗೆ ಉಲ್ಟಾ ಹೊಡೆಯಲಿದೆ ಅದಾನಿ ಹಗರಣ: ಸತ್ಯಪಾಲ್ ಮಲಿಕ್

ನವದೆಹಲಿ: ದೇಶದ ಬಹುಕೋಟ್ಯಾಧಿಪತಿ ಉದ್ಯಮಿ, ಪ್ರಧಾನಿ ನರೇಂದ್ರ ಮೋದಿಯವರ ಆಪ್ತ ಅದಾನಿಗೆ ಸಂಬಂಧಿಸಿ ಗಂಭೀರ ಭ್ರಷ್ಟಾಷಾರದ ಆರೋಪಗಳು 2024ರ ಚುನಾವಣೆಯಲ್ಲಿ ಬಿಜೆಪಿ ಮೇಲೆ ಪರಿಣಾಮ ಬೀರಲಿದೆ ಎಂದು ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಹೇಳಿದ್ದಾರೆ.

ದ ವೈರ್ ಜೊತೆಗಿನ ಸಂದರ್ಶನದಲ್ಲಿ ಮಾತನಾಡಿದ ಅವರು,

ಗೌತಮ್ ಅದಾನಿ ವಿರುದ್ಧದ ಆರೋಪಗಳ ಬಗ್ಗೆ ಮೋದಿ ಸರಕಾರದಿಂದ ಯಾವುದೇ ಸ್ಪಷ್ಟ ಪ್ರತಿಕ್ರಿಯೆ ಇಲ್ಲ. ಇದೇ ಆರೋಪಗಳ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸಂಸತ್ತಿನಲ್ಲಿ ಮಾತನಾಡಲು ಅವಕಾಶ ನೀಡಬೇಕಿತ್ತು ಎಂದು ಅವರು ಹೇಳಿದ್ದಾರೆ.

ಇದೇ ಸಂದರ್ಭ ಅದಾನಿ ಕಂಪನಿಗಳಲ್ಲಿನ 20,000 ಕೋಟಿ ರೂ.ಗಳ ಮೂಲದ ಬಗ್ಗೆ ರಾಹುಲ್ ಗಾಂಧಿಯವರ ಆರೋಪಗಳಿಗೆ ಪ್ರಧಾನಿ ಮೋದಿ ಇನ್ನೂ ಉತ್ತರಿಸಿಲ್ಲ ಎಂದೂ ಅವರು ಉಲ್ಲೇಖಿಸಿದ್ದಾರೆ.

ಹೆಚ್ಚಿನ ಸುದ್ದಿ